ಬೆಂಗಳೂರು:ಬೊಮ್ಮನಹಳ್ಳಿಯ ಸೋಮಸುಂದರ ಪಾಳ್ಯದಲ್ಲಿರುವ ರವೀಂದ್ರ ಭಾರತಿ ಗ್ಲೋಬಲ್ ಶಾಲೆಯಲ್ಲಿ ನಿನ್ನೆಯಷ್ಟೇ ಶಾಲಾ ಶುಲ್ಕ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ಶಾಲಾ ಶುಲ್ಕ ಕಿರುಕುಳಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ - ಶಿಕ್ಷಣ ಸಚಿವ ಸುರೇಶ್ ಕುಮಾರ್
ಶಾಲಾ ಶುಲ್ಕ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ಶಾಲಾ ಶುಲ್ಕ ಕಟ್ಟದ ಹಿನ್ನೆಲೆ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಜಯಂತ್ನನ್ನು ಶಾಲಾ ಆಡಳಿತ ಮಂಡಳಿ ಪರೀಕ್ಷಾ ಕೊಠಡಿಯಿಂದ ಹೊರ ಕಳುಹಿಸಿದ್ದರು. ಇದರಿಂದ ಮನನೊಂದ ವಿದ್ಯಾರ್ಥಿ ಜಯಂತ್ ಆತ್ಮಹತ್ಯೆಗೆ ಯತ್ನಿಸಿದ್ದ. ಪೋಷಕರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿತ್ತು. ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಇದೆ ವೇಳೆ ಸಚಿವರು ಶಿಕ್ಷಣ ಸಂಸ್ಥೆಯ ವಿರುದ್ಧ ದೂರು ದಾಖಲಿಸಿಕೊಳ್ಳಲು ಮೀನಾಮೇಷ ಮಾಡಿದ್ದಾರೆನ್ನಲಾದ ಎಸಿಪಿ ಪವನ್ ವಿರುದ್ಧ ಕ್ರಮಕ್ಕೆ ಡಿಸಿಪಿ ಜೋಷಿ ಜೊತೆ ಮಾತನಾಡುವುದಾಗಿ ತಿಳಿಸಿದ್ದಾರೆ.