ಕರ್ನಾಟಕ

karnataka

ETV Bharat / state

ಬಡವರಿಗೆ ಸೂರು ಕಲ್ಪಿಸುವ ಪ್ರಧಾನಿ ಆಶಯ ಈಡೇರಿಸುವುದೇ ನಮ್ಮ ಗುರಿ: ವಸತಿ ಸಚಿವ ಸೋಮಣ್ಣ - ವಸತಿ ಸಚಿವ ಸೋಮಣ್ಣ

ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಹಕ್ಕುಪತ್ರ ವಿತರಣೆ ಮತ್ತು ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಪ್ರಧಾನಿ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಮನೆ ಕಟ್ಟಲು ಅನುದಾನ ಬಿಡುಗಡೆ ಮಾಡಿದರು.

V. Somanna
V. Somanna

By

Published : Mar 25, 2021, 2:07 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶಯ ಪ್ರತಿಯೊಬ್ಬ ಬಡವರು, ಸೂರು ಇಲ್ಲದೇ ಜೀವನ ಸಾಗಿಸುವವರಿಗೆ ಶಾಶ್ವತ ಸೂರು ಕಲ್ಪಿಸಬೇಕು ಎಂಬುವುದು. ಈ ಆಶಯವನ್ನು ಈಡೇರಿಸುವ ಸಮಯ ಇದಾಗಿದೆ ಎಂದು ವಸತಿ ಸಚಿವ ಸೋಮಣ್ಣ ತಿಳಿಸಿದರು.

ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ಹಕ್ಕುಪತ್ರ ವಿತರಣೆ ಮತ್ತು ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಪ್ರಧಾನಿ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಮನೆ ಕಟ್ಟಲು ಅನುದಾನ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಎಲ್ಲಾ ಧರ್ಮ, ವರ್ಗದ ಜನರಿಗೆ ವಸತಿ ಸೌಲಭ್ಯ ಸಿಗಬೇಕು ಎಂದರು.

ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಸಚಿವರು,ಗೋವಿಂದರಾಜನಗರ ವಾರ್ಡ್, ದಾಸರಹಳ್ಳಿ ಮತ್ತು ಡಾ. ರಾಜ್ ಕುಮಾರ್ ವಾರ್ಡ್​​​ನ ನೂರಾರು ಬಡವರಿಗೆ ಹಕ್ಕುಪತ್ರ ಮತ್ತು ಮನೆ ಕಟ್ಟಲು ಚೆಕ್​​ ನೀಡಿದರು.

ಕಳೆದ 40ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಹಕ್ಕುಪತ್ರ ನೀಡಲಾಗುತ್ತಿದ್ದು, ಹಕ್ಕುಪತ್ರ ಫಲಾನುಭವಿಗಳು ನೋಂದಣಿ ಶುಲ್ಕ ಸಾಮಾನ್ಯ ವರ್ಗದವರಿಗೆ 10ರಿಂದ 4 ಸಾವಿರಕ್ಕೆ ಮತ್ತು SC/ST ಸಮುದಾಯದವರಿಗೆ 4ಸಾವಿರದಿಂದ 2ಸಾವಿರಕ್ಕೆ ಇಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಹೃದಯಭಾಗದಲ್ಲಿದ್ದು, ಹಕ್ಕುಪತ್ರ ಫಲಾನುಭವಿಗಳು ಮನೆ ಮಾರಾಟ ಮಾಡಬೇಡಿ ಎಂದು ಕಿವಿಮಾತು ಹೇಳಿದರು.

ABOUT THE AUTHOR

...view details