ಕರ್ನಾಟಕ

karnataka

By

Published : Oct 25, 2022, 5:40 PM IST

ETV Bharat / state

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಡಿಸಿ, ಜಿ.ಪಂ ಸಿಇಓಗಳ ಜತೆ ಸಭೆ

ನವೆಂಬರ್​ 11ರಂದು ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಸುಗಮವಾಗಿ ನಡೆಸಲು ಜಿಲ್ಲಾಧಿಕಾರಿ ಮತ್ತು ಜಿ.ಪಂ ಸಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಾಯಿತು.

ministers-meeting-for-unveiling-of-kempegowda-statue
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ : ಡಿಸಿ, ಜಿಪಂ ಸಿಇಓಗಳ ಜತೆ ಸಭೆ

ಬೆಂಗಳೂರು: ನ. 11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪೂರಕವಾಗಿ ನಡೆಯುತ್ತಿರುವ ರಾಜ್ಯಮಟ್ಟದ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನವನ್ನು ಸುಗಮವಾಗಿ ನಡೆಸುವ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ್​ ಸಿಇಓಗಳ ಜೊತೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ, ಪ್ರಾಧಿಕಾರದ ಸದಸ್ಯ ಹಾಗೂ ಕಂದಾಯ ಸಚಿವ ಆರ್ ಅಶೋಕ್, ಮತ್ತು ಸಚಿವರಾದ ಎಸ್ ಟಿ ಸೋಮಶೇಖರ್, ನಾರಾಯಣ ಗೌಡ, ಮುನಿರತ್ನ ಮೊದಲಾದವರು ಪಾಲ್ಗೊಂಡಿದ್ದರು.

ಡಿಸಿ, ಜಿಪಂ ಸಿಇಓಗಳ ಸಭೆಯಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ್​

ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ: ಅಭಿಯಾನದ ಅಂಗವಾಗಿ ಚಾಲನೆ ಪಡೆದಿರುವ ವಿಶೇಷ ರಥಗಳು ಈಗಾಗಲೇ ಜಿಲ್ಲೆಗಳನ್ನು ತಲುಪಿವೆ. ಹಾಸನ, ಮಂಡ್ಯ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಾತ್ರ ಈ ರಥಗಳು ಇನ್ನೂ ತಲುಪಿಲ್ಲ ಎಂದು ಅಶ್ವತ್ಥನಾರಾಯಣ ವಿವರಿಸಿದರು. ಅಭಿಯಾನಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗೆ ಎಲ್ಲರೂ ಬದ್ಧವಾಗಿರಬೇಕು. ವಿಶೇಷ ರಥಗಳು ಆಯಾ ಗ್ರಾಮವನ್ನು ತಲುಪುವ ಮೊದಲೇ ಸಂದೇಶ ತಲುಪಿಸಿ ಅಭಿಯಾನಕ್ಕೆ ಒದಗಿಸಿರುವ ಪೌಚುಗಳಲ್ಲಿ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಬೇಕು ಎಂದು ಅವರು ಸೂಚಿಸಿದರು.

ಹೀಗೆ ಸಂಗ್ರಹವಾದ ಪವಿತ್ರ ಮಣ್ಣನ್ನು ನ.7ರಂದು ಜಿಲ್ಲಾ ಕೇಂದ್ರಗಳಲ್ಲಿ, ನ.8ರಂದು ಈ ರಥಗಳು ಬೆಂಗಳೂರನ್ನು ತಲುಪುವಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳ ಹೊಣೆಯಾಗಿದೆ. ಬಳಿಕ ಪವಿತ್ರ ಮೃತ್ತಿಕೆ ಸ್ವೀಕಾರ ಕಾರ್ಯಕ್ರಮ ನಡೆಸಲಾಗುವುದು. ಅಭಿಯಾನವು ಜಿಲ್ಲಾ ಮಟ್ಟಗಳಲ್ಲಿ ಆರಂಭವಾಗಿರುವ ಬಗ್ಗೆ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಬೇಕು ಮತ್ತು ನಿರ್ದಿಷ್ಟ ಮಾರ್ಗಗಳಲ್ಲಿ ಸಾಗುವ ಬಗ್ಗೆ ಎಚ್ಚರ ವಹಿಸಬೇಕು. ಅಲ್ಲದೆ ದಿನದ ಪ್ರಗತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅವರು ನಿರ್ದೇಶಿಸಿದರು.

ಪ್ರತಿ ಗ್ರಾಮದಲ್ಲೂ ಇರುವ ಪವಿತ್ರ ಕೆರೆಕಟ್ಟೆ, ನದಿ, ಕಲ್ಯಾಣಿ ಅಥವಾ ಪುಷ್ಕರಿಣಿಯಿಂದ ಮೃತ್ತಿಕೆ ಸಂಗ್ರಹವಾಗುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಜೊತೆಗೆ ವಿಶೇಷ ರಥಗಳು ಆಗಮಿಸಿದಾಗ ದೇವಸ್ಥಾನಗಳಲ್ಲಿ ಪೂರ್ಣಕುಂಭ ಸ್ವಾಗತಕ್ಕೆ ವ್ಯವಸ್ಥೆ ಮಾಡಬೇಕು ಎಂದು ಅವರು ಕಟ್ಟುನಿಟ್ಟಾಗಿ ಹೇಳಿದರು.

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುವಂತಾಗಬೇಕು. ಇದೊಂದು ಸರ್ಕಾರಿ ಕಾರ್ಯಕ್ರಮ. ಕಾರ್ಯಕ್ರಮಕ್ಕೆ ಸ್ವಸಹಾಯ ಗುಂಪು, ನರೇಗಾದಲ್ಲಿ ಕೆಲಸ ಮಾಡುವ ನೌಕರರು ಕಾರ್ಯಕ್ರಮದಲ್ಲಿ ಭಾಗವಹಿಸಲು ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಪ್ರಾಧಿಕಾರದ ಆಯುಕ್ತ ವಿನಯ್ ದೀಪ ಉಪಸ್ಥಿತರಿದ್ದರು.

ಇದನ್ನೂ ಓದಿ :ನಿಮ್ಮ ಮಕ್ಕಳಿಗೆ ಬುದ್ಧಿ ಹೇಳದಿದ್ದರೆ ಅರೆಸ್ಟ್​ ಆಗ್ತಾರೆ: ಈಶ್ವರಪ್ಪ ಎಚ್ಚರಿಕೆ

ABOUT THE AUTHOR

...view details