ಕರ್ನಾಟಕ

karnataka

ETV Bharat / state

ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ  ಸಚಿವರು!

ಕನ್ನಡ ಚಲನಚಿತ್ರ ನಿರ್ದೇಶಕರು, ನಿರ್ಮಾಪಕರು, ಸಚಿವರನ್ನು ಭೇಟಿಯಾಗಿ ಕನ್ನಡ ಚಿತ್ರರಂಗದ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಿದರು.

By

Published : Oct 12, 2022, 9:28 PM IST

KN_BNG_0
ಚಿತ್ರರಂಗದವರೊಂದಿಗೆ ಸಚಿವರ ಸಭೆ

ಬೆಂಗಳೂರು: ಕನ್ನಡ ಚಿತ್ರರಂಗವು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ, ಚಲನಚಿತ್ರ ನಿರ್ದೇಶಕರು, ನಿರ್ಮಾಪಕರು, ವಿತರಕರು ಹಾಗೂ ಕಲಾವಿದರ ಸಂಘದ ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಚಿತ್ರ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

ಸರ್ಕಾರವು ಈ ಹಿಂದೆ ಜನತಾ ಚಿತ್ರಮಂದಿರಗಳನ್ನು ಸ್ಥಾಪಿಸಲು 50 ಲಕ್ಷ ರೂಪಾಯಿಗಳ ಅನುದಾನ ಘೋಷಣೆ ಮಾಡಿದ್ದರೂ ಯೋಜನೆ ಜಾರಿ ಆಗುತ್ತಿಲ್ಲ, ಆ್ಯಪ್ ಮೂಲಕ ಟಿಕೆಟ್ ಮಾರಾಟ ಆಗುತ್ತಿರುವುದರಿಂದ ತೊಂದರೆಗಳು ಹಾಗೂ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ರಾಜ್ಯ ಅಭಿಯೋಜಕ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಚರ್ಚೆ ನಡೆಸಿದರು. ರಾಜ್ಯವು, ತನ್ನದೇ ಆದ ಪ್ರಾಸಿಕ್ಯೂಷನ್ ನೀತಿ ಹೊಂದಬೇಕು ಎಂಬ ಬೇಡಿಕೆ ಬಗ್ಗೆ, ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು, ನೊಂದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಸರ್ಕಾರ ಎಲ್ಲಾ ಸಹಕಾರ ನೀಡುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅಭಿಯೋಜಕರ ಸಂಘದ ಅಧ್ಯಕ್ಷ ಬಿ.ಎಸ್.ಪಾಟೀಲ್ ಅವರು, ಮನವಿ ಪತ್ರ ಸಲ್ಲಿಸಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಇತರರು ಉಪಸ್ಥಿತರಿದ್ದರು.

ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಿನ್ನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾವೇರಿ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ. ಉಳಿದವರಿಗಾಗಿ ಶೋಧ ಮಾಡುತ್ತಿದ್ದಾರೆ. ಒಂದಷ್ಟು ಜನರನ್ನ ವಿಡಿಯೋ ಆಧಾರದ ಮೇಲೆ ಹುಡುಕಲಾಗ್ತಿದೆ. ಜಿಲ್ಲಾ ಎಸ್ಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಅಡಕೆ ಬೆಳೆಗಾರರ ಮೇಲೆ ಬರೆ ಎಳೆಯುವ ಕೇಂದ್ರದ ಹುನ್ನಾರ: ಹೆಚ್​​​ಡಿಕೆ

ABOUT THE AUTHOR

...view details