ಕರ್ನಾಟಕ

karnataka

ETV Bharat / state

ಬ್ಲ್ಯಾಕ್ ಫಂಗಸ್ ಹಾವಳಿ : ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವದ್ವಯರು

ಬೆಡ್ ಅಲೋಕೇಷನ್ ಮಾಡಲು ಕಂದಾಯ ಮತ್ತು ಗೃಹ ಸಚಿವರು ಸಲಹೆ ನೀಡಿದ್ದರು. ವಿಕ್ಟೋರಿಯಾ, ಬೌರಿಂಗ್‌ನಲ್ಲಿ 50 ಬೆಡ್‌ಗಳನ್ನ 100ಕ್ಕೆ ಏರಿಕೆ ಮಾಡಲು ಸೂಚಿಸಲಾಗಿದೆ..

ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವದ್ವಯರು
ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವದ್ವಯರು

By

Published : May 24, 2021, 7:49 PM IST

ಬೆಂಗಳೂರು :ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಚಿಕಿತ್ಸೆಗೆ ಅಗತ್ಯ ಔಷಧಿ ಸರಬರಾಜು, ಉತ್ಪಾದನೆ ಕಡಿಮೆ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಸಚಿವ ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಹಿತಿ ನೀಡಿದ ಸುಧಾಕರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದಗೌಡರ ಜೊತೆ ಮಾತುಕತೆ ನಡೆಸಿ ಹೆಚ್ಚಿನ ಔಷಧ ಪಡೆಯುವ ಪ್ರಯತ್ನ ನಡೆಸಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳುತ್ತಿದೆ.

ಬೆಡ್ ಅಲೋಕೇಷನ್ ಮಾಡಲು ಕಂದಾಯ ಮತ್ತು ಗೃಹ ಸಚಿವರು ಸಲಹೆ ನೀಡಿದ್ದರು. ವಿಕ್ಟೋರಿಯಾ, ಬೌರಿಂಗ್‌ನಲ್ಲಿ 50 ಬೆಡ್‌ಗಳನ್ನ 100ಕ್ಕೆ ಏರಿಕೆ ಮಾಡಲು ಸೂಚಿಸಲಾಗಿದೆ ಎಂದರು.

ನಂತರ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬ್ಲ್ಯಾಕ್ ಫಂಗಸ್ ಎಲ್ಲೆಡೆ ಹರಡುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಸೋಂಕು ಹೆಚ್ಚಳವಾಗಿದೆ. ಪ್ರತಿ ಜಿಲ್ಲೆಯಲ್ಲೂ 5 ರಿಂದ 10 ಬೆಡ್ ಮೀಸಲಿಡಲು ಸೂಚಿಸಲಾಗಿದೆ.

ಈಗಾಗಲೇ ಒಂದು ಸುತ್ತಿನ ಮಾತುಕತೆ ಮಾಡಿದ್ದೇವೆ ಎಂದರು. ಲಸಿಕೆ ಉತ್ಪಾದಕರ ಜೊತೆ ಮಾತನಾಡಲಾಗಿದೆ. ನಮ್ಮ ರಾಜ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಈಗಾಗಲೇ ಪೋರ್ಟಲ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಓದಿ:ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್: ಸುರೇಶ್ ಕುಮಾರ್

ABOUT THE AUTHOR

...view details