ಬೆಂಗಳೂರು: ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೇರಿ ಇಬ್ಬರ ಮೇಲೆ ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಈ ಘಟನೆ ಕೆ ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಶೀಟರ್ ಶಿವಶಂಕರ್ ರೆಡ್ಡಿ ಹಾಗೂ ಚಾಲಕ ಅಶೋಕ್ ರೆಡ್ಡಿ ಗುಂಡಿನ ದಾಳಿಗೊಳಗಾಗಿ ಗಾಯಗೊಂಡಿದ್ದು ಕೆ ಆರ್ ಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಶಂಕರ್ ರೆಡ್ಡಿ ವಿರುದ್ಧ ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ಎರಡು ಕೊಲೆ ಪ್ರಕರಣ ದಾಖಲಾಗಿದ್ದು, ಕಳೆದ ಆರು ದಿನಗಳ ಹಿಂದೆ ಕುರುಡುಸೊನ್ನೇನಹಳ್ಳಿಯ ಹ್ಯಾಪಿ ಗಾರ್ಡನ್ ಲೇಔಟ್ನ ಬಳಿ ಮನೆ ನಿರ್ಮಾಣಕ್ಕಾಗಿ ನಗರಕ್ಕೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.