ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಜೊತೆಗೆ ವಾಹನಗಳಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕಾವಲ್ ಭೈರಸಂದ್ರದಲ್ಲಿ ನಡೆದಿದೆ.
ಶಾಸಕರ ಸಂಬಂಧಿಕರೊಬ್ಬರು ಒಂದು ಸಮುದಾಯದ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಂತೆ. ಈ ಪೋಸ್ಟ್ ಹಾಕಿದ ನಂತರ ಅವರು, ನನ್ನ ಅಕೌಂಟ್ ಹ್ಯಾಕ್ ಆಗಿದೆ. ನಾನು ಈ ಪೋಸ್ಟ್ ಮಾಡಿಲ್ಲ ಎಂದು ರೀ ಪೋಸ್ಟ್ ಮಾಡಿದ್ದಾರೆ.