ಬೆಂಗಳೂರು: ಮಂಗಳವಾರ ರಾತ್ರಿ ನಡೆದ ಗಲಭೆ ವೇಳೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಆತಂಕಗೊಂಡಿರುವ ಪುಲಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಇದೀಗ ತಮಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.
ಜೀವ ಬೆದರಿಕೆ ಇದೆ, ಪೊಲೀಸ್ ಭದ್ರತೆ ನೀಡಿ: ಕಮೀಷನರ್ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ! - ಕಮೀಷನರ್ ಭೇಟಿ
ಬೆಂಗಳೂರು ಗಲಭೆ ಬಳಿಕ ಇದೀಗ ಶಾಸಕ ಅಖಂಡ ಶ್ರಿನಿವಾಸ ಮೂರ್ತಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಭೇಟಿ ಮಾಡಿದ್ದಾರೆ.
ಪೊಲೀಸ್ ಭದ್ರತೆ ಕೋರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಧ್ವಂಸಗೊಂಡಿರುವ ನಿವಾಸಕ್ಕೆ ಸಂಬಂಧಿಸಿದಂತೆ ಡಿ.ಜಿ.ಹಳ್ಳಿ ಠಾಣೆಯಲ್ಲಿ ದೂರು ನೀಡಿದ ಬಳಿಕ ಇನ್ ಪೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮೀಷನರ್ ಕಚೇರಿಗೆ ತೆರಳಿ ದೂರು ನೀಡಿದರು.ಬಳಿಕ ಕಿಡಿಗೇಡಿಗಳಿಂದ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆವಿದೆ. ಹೀಗಾಗಿ ನನಗೆ ಹಾಗೂ ಕುಟುಂಬಕ್ಕೆ ಪೊಲೀಸ್ ಭದ್ರತೆ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆ ಸಂಬಂಧ ಕಮೀಷನರ್ಗೆ ದೂರು ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ತಮಗೆ ಹಾಗೂ ಕುಟುಂಟಕ್ಕೂ ಭದ್ರತೆ ನೀಡಬೇಕೆಂದು ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ. ಭದ್ರತೆ ನೀಡುವುದು ಬಿಡೋದು ಅವರಿಗೆ ಬಿಟ್ಟಿರುವ ವಿಚಾರ ಎಂದರು. ಇದೇ ವೇಳೆ ಕಾಂಗ್ರೆಸ್ ರಚನೆ ಮಾಡಿರುವ ಸತ್ಯ ಶೋಧನಾ ಸಮಿತಿಯಲ್ಲಿ ಯಾರೂ ಕೂಡ ದೂರು ನೀಡದಂತೆ ಒತ್ತಡ ತಂದಿಲ್ಲ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದರು.