ಕರ್ನಾಟಕ

karnataka

ETV Bharat / state

ಜಾಕೀರ್ ಬಂಧನವಾಗಿದೆ, ನನಗೆ ನ್ಯಾಯಸಿಗುವ ಭರವಸೆ ಇದೆ: ಅಖಂಡ ಶ್ರೀನಿವಾಸಮೂರ್ತಿ - MLA Akhanda Srinivas Murthy News

ಇದು ನನ್ನ ಮನೆಗೆ ಸಂಬಂಧಿಸಿದ ವಿಷಯ. ಹಾಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಶಿಸ್ತು ಸಮಿತಿ ಸ್ಪಂದಿಸದೇ ಇದ್ದಲ್ಲಿ ಎಐಸಿಸಿಗೆ ಪತ್ರ ಬರೆಯುತ್ತೇನೆ ಎಂದು ಹೇಳುವ ಮೂಲಕ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷದ ವಿರುದ್ಧವೇ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

MLA Akhanda Srinivas Murthy Spoke About Zakir Arrest
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

By

Published : Dec 3, 2020, 3:06 PM IST

Updated : Dec 3, 2020, 3:50 PM IST

ಬೆಂಗಳೂರು: ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನವಾಗಿದೆ ಎಂಬ ಮಾಹಿತಿ ಇದೆ. ಇದರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಮಾಜಿ ಕಾರ್ಪೋರೇಟರ್ ಜಾಕೀರ್​​ ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡಿದ್ದೆ. ಅವರು ಶಿಸ್ತು ಸಮಿತಿಗೆ ವಹಿಸುವ ಭರವಸೆ ನೀಡಿದ್ದರು. ಇದುವರೆಗೆ ಶಿಸ್ತು ಸಮಿತಿಗೆ ವಹಿಸಿದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಇದು ನನ್ನ ಮನೆಗೆ ಸಂಬಂಧಿಸಿದ ವಿಷಯ. ಹಾಗಾಗಿ ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಶಿಸ್ತು ಸಮಿತಿ ಸ್ಪಂದಿಸದೇ ಇದ್ದಲ್ಲಿ ಎಐಸಿಸಿಗೆ ಪತ್ರ ಬರೆಯುತ್ತೇನೆ. ನನಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆದರೂ ಅವರಿಗೆ ಶಿಕ್ಷೆಯಾಗಬೇಕು. ಹಾಗಂತ ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪಕ್ಷದ ರಾಜ್ಯ ನಾಯಕರಿಂದ ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ: ಅಖಂಡ ಶ್ರೀನಿವಾಸಮೂರ್ತಿ

ಅರವಿಂದ ಲಿಂಬಾವಳಿ ನನಗೆ ಸಂಬಂಧಿಕರು ಹಾಗಾಗಿ ನನಗೆ ಬೆಂಬಲ ಸೂಚಿಸಿದ್ದಾರೆ. ಬೋವಿ ಸಮಾಜದ ಗುರುಗಳೂ ಬೆಂಬಲಿಸಿದ್ದಾರೆ. ಆದರೂ ನನ್ನ ತಂದೆ ಕಾಲದಿಂದ ನಾವು ಕಾಂಗ್ರೆಸ್​ನಲ್ಲೇ ಇದ್ದೇವೆ. ಮುಂದೆಯೂ ಕಾಂಗ್ರೆಸ್ ನಲ್ಲೇ ಇರುತ್ತೇವೆ ಎಂದರು.

ಪೊಲೀಸರು, ನ್ಯಾಯಾಲಯ ಹಾಗೂ ಮಾಧ್ಯಯಮಗಳಿಂದಾಗಿ ನ್ಯಾಯ ದೊರಕುತ್ತಿದೆ, ಇವರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ ಎಂದು ಅಭಿಪ್ರಾಯಪಟ್ಟರು.

Last Updated : Dec 3, 2020, 3:50 PM IST

ABOUT THE AUTHOR

...view details