ಬೆಂಗಳೂರು: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ, ರಕ್ಷಣೆ ಕೋರಿ ಮನವಿ ಸಲ್ಲಿಸಿರುವುದಾಗಿ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ತಿಳಿಸಿದ್ದಾರೆ.
ಭದ್ರತೆ ಕೋರಿ ಸ್ಪೀಕರ್ಗೆ ಮನವಿ ಮಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ - mla akanda srinivas murthy seeking security news
ಪುಲಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇಂದು ವಿಧಾನಸೌಧಕ್ಕೆ ಭೇಟಿ ನೀಡಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ರಕ್ಷಣೆ ಕೋರಿ ಮನವಿ ಮಾಡಿದ್ದಾರೆ.
ಕ್ಷೇತ್ರದಲ್ಲಿ ಮತ್ತಷ್ಟು ಕೆಲಸ ಮಾಡಬೇಕಾಗಿರುವುದರಿಂದ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ. ಈಗಾಗಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಭದ್ರತೆ ಕೋರಲಾಗಿದ್ದು, ಅವರು ಭದ್ರತೆ ಒದಗಿಸಿದ್ದಾರೆ ಎಂದರು. ರಾಜ್ಯದಲ್ಲಿ 224 ಶಾಸಕರಿದ್ದಾರೆ, ಅವರಲ್ಲಿ ನಾನು ಒಬ್ಬ. ಯಾರಿಗೂ ಅನ್ಯಾಯ ಆಗಬಾರದು. ಅದೇ ರೀತಿ ಸಾಮಾನ್ಯ ಜನರಿಗೂ ಅನ್ಯಾಯ ಆಗಬಾರದು ಎಂದು ಮನವಿ ಮಾಡಲಾಗಿದೆ ಎಂದು ಹೇಳಿದರು. ತನಿಖೆಯಾಗಲಿ, ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಫೇಸ್ಬುಕ್ ಪೋಸ್ಟ್ ವಿಚಾರವಾಗಿ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿಯಲ್ಲಿ ಉಂಟಾದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು.