ಬೆಂಗಳೂರು:ನನ್ನ ಹಿತೈಷಿಗಳು ಮತ್ತು ಮಾರ್ಗದರ್ಶಕರೂ ಆದ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ವೈಯಕ್ತಿಕವಾಗಿ ನನಗೆ ಅತ್ಯಂತ ಸಂತೋಷವಾಗಿದೆ. ಈ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರ ಸೂಕ್ತವಾಗಿದೆ ಎಂದು ಸಿಎಂ ರೇಸ್ನಲ್ಲಿದ್ದ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ಆಯ್ಕೆಯಿಂದ ನನಗೆ ಅತ್ಯಂತ ಸಂತೋಷವಾಗಿದೆ: ಅರವಿಂದ್ ಬೆಲ್ಲದ್ - cm basavraj bommai news
ಬಸವರಾಜ ಬೊಮ್ಮಾಯಿ ಅವರ ಆಯ್ಕೆಯಿಂದ ನನಗೆ ಅತ್ಯಂತ ಸಂತೋಷವಾಗಿದೆ ಎಂದು ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದ ಶಾಸಕ ಅರವಿಂದ್ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಅನುಕೂಲವಾಗುವಂತೆ 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.
ನಿಮ್ಮ ಹೆಸರು ಕೊನೆಯವರೆಗೂ ಸಿಎಂ ಪಟ್ಟಿಯಲ್ಲಿ ಇತ್ತು ಎಂದಾಗ, ನಾನು ಪಕ್ಷದ ಕಾರ್ಯಕರ್ತ. ಪಕ್ಷ ಕೊಟ್ಟ ಕೆಲಸವನ್ನು ಮಾಡುತ್ತೇನೆ. ನನಗೆ ಸಂಪೂರ್ಣವಾಗಿ ನಂಬಿಕೆ ಇದೆ. ರಾಜ್ಯವನ್ನು ಬೊಮ್ಮಾಯಿ ಅವರು ಮುನ್ನಡೆಸುತ್ತಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.