ಮಹದೇವಪುರ: ಕ್ಷೇತ್ರದ ಬೆಳ್ಳಂದೂರು ಹಾಗೂ ವರ್ತೂರು ವಾರ್ಡ್ನಲ್ಲಿ ಸೂಮಾರು 40 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ ನೀಡಿದರು. ಅಭಿವೃದ್ಧಿ ಪೂರಕ ಕಾರ್ಯಗಳನ್ನು ಸರ್ಮಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
40 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಲಿಂಬಾವಳಿ
ಬೆಳ್ಳಂದೂರು ಹಾಗೂ ವರ್ತೂರು ವಾರ್ಡ್ನಲ್ಲಿ ಸೂಮಾರು 40 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅರವಿಂದ ಲಿಂಬಾವಳಿ ಶಂಕು ಸ್ಥಾಪನೆ ಮಾಡಿದರು.
40 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಲಿಂಬಾವಳಿ
ಅಭಿವೃದ್ಧಿ ಕಾಮಾಗಾರಿಗಳ ಶಂಕು ಸ್ಥಾಪನೆ ಮಾಡಿ ಮಾತನಾಡಿದ ಶಾಸಕರು, ಅಭಿವೃದ್ಧಿ ಕಾಮಾಗಾರಿಗಳನ್ನು ಸಮರ್ಪಕವಾಗಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು. ರಸ್ತೆ, ಕುಡಿಯುವ ನೀರು, ಒಳಚರಂಡಿ ಕಾಮಾಗಾರಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ದೂರ ಮಾಡಬೇಕೆಂದು ಹೇಳಿದರು. ಕಳಪೆ ಕಾಮಾಗಾರಿ ಕಂಡು ಬಂದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬೆಳ್ಳಂದೂರು ಹಾಗೂ ವರ್ತೂರು ಭಾಗಗಳ ಅಭಿವೃದ್ಧಿ ಕಾಮಾಗಾರಿಗಳ ಪರಿಶೀಲನೆ ನಡೆಸಿದರು.