ಬೆಂಗಳೂರು: ಒಕ್ಕಲಿಗ ಅಭಿವೃದ್ಧಿ ನಿಗಮದ ಹೊಸ ಅಧ್ಯಕ್ಷರನ್ನಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶಿಸಿತ್ತು.
ಒಕ್ಕಲಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಎಂ.ಕೃಷ್ಣಪ್ಪ ನೇಮಕ - Bangalore
ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎಂ.ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿದೆ.
ಶಾಸಕ ಎಂ.ಕೃಷ್ಣಪ್ಪ
ನಿಗಮದ ಸದಸ್ಯರನ್ನಾಗಿ ಸುರಭಿ ರಘು ಹಾಗೂ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡರನ್ನು ನೇಮಿಸಲಾಗಿದೆ. ಸಿಎಂ ಬದಲಾವಣೆ ಕೂಗು ಹೆಚ್ಚಾಗುತ್ತಿರುವ ಮಧ್ಯೆ ನಿಗಮಗಳಿಗೆ ನೇಮಕಾತಿ ಆದೇಶ ಹೊರಡಿಸಲಾಗುತ್ತಿದೆ.
ಇದನ್ನೂ ಓದಿ: ಕೊನೆಗೂ ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ