ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಹೂವಪ್ಪಗೌಡ ಎಂಬುವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದ ಎಂ.ಪಿ. ಕುಮಾರಸ್ವಾಮಿ ಅವರು, ಸಾಲ ಮರುಪಾವತಿಗೆ ಹೂವಪ್ಪಗೌಡಗೆ 8 ಚೆಕ್ಗಳನ್ನು ನೀಡಿದ್ದರು. ಆದರೆ ಆ 8 ಚೆಕ್ಗಳೂ ಸಹ ಬೌನ್ಸ್ ಆಗಿದ್ದರಿಂದ ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ ಹೂವಪ್ಪ ಗೌಡ 8 ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜೆ. ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಪ್ರಕರಣಗಳಲ್ಲಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ. ಅಂದರೆ ಸಾಲ ಮರುಪಾವತಿ ಮಾಡದಿದ್ದಲ್ಲಿ 6 ತಿಂಗಳು ಜೈಲು ಶಿಕ್ಷೆ ಪ್ರಕಟಿಸಲಾಗಿದೆ.