ಬೆಂಗಳೂರು :ಕಾಲು ನೋವಿಗೆ ಒಳಗಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಆರೈಕೆಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಯುರ್ವೇದ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ರೇಣುಕಾಚಾರ್ಯ, ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿತ್ತು. ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ಗೊಳಗಾಗಿದ್ದೇನೆ.