ಬೆಂಗಳೂರು :ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ಓದಿ: ಯಡಿಯೂರಪ್ಪ ನಮ್ಮ ನಾಯಕ, ಮುಖ್ಯಮಂತ್ರಿ ಆಗಿ ಅವಧಿ ಮುಗಿಸಲಿದ್ದಾರೆ: ಬೊಮ್ಮಾಯಿ
ಲಗ್ಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಾವ ಸಂಧರ್ಭದಲ್ಲಿ ಏನು ಹೇಳಿದ್ದರೋ ಗೊತ್ತಿಲ್ಲ. ಆದರೆ, ಅವರೇ ನಮ್ಮ ನಾಯಕರು, ನಾನು ಕುರ್ಚಿಗೆ ಅಂಟಿಕೊಂಡಿಲ್ಲ, ಶಿಸ್ತಿನ ಸಿಪಾಯಿ ಎಂದು ಹೇಳಿದ್ದಾರೆ. ಆ ಮೂಲಕ ಪ್ರತಿಪಕ್ಷ ಮತ್ತು ಕೆಲವರಿಗೆ ಸಂದೇಶ ರವಾನೆ ಮಾಡಿದ್ದಾರೆ ಎಂದರು.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದೂವರೆಯಲಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ನಮ್ಮ ಪಕ್ಷ ಕೇಡರ್ ಬೇಸ್ಡ್ ಪಾರ್ಟಿ, ನಾವು ಅಧಿಕಾರಕ್ಕಾಗಿ ಅಂಟಿಕೊಂಡಿಲ್ಲ. ಪಕ್ಷವೇ ಮುಖ್ಯ ಅನ್ನೋದನ್ನ ಅವರು ಹೇಳಿದ್ದಾರೆ.
ಜೊತೆಗೆ ನಮ್ಮ ಪಕ್ಷದಲ್ಲಿ ನಾಯಕರು ಇದ್ದಾರೆ ಎಂದು ಸಿಎಂ ಹೇಳಿದ್ದಾರೆ. ಹಲವು ನಾಯಕರನ್ನ ಸಿಎಂ ಬೆಳೆಸಿದ್ದಾರೆ. ಹಾಗಾಗಿಯೇ ನಮ್ಮಲ್ಲಿ ನಾಯಕರು ಇದ್ದಾರೆ ಎಂದು ಹೇಳಿದ್ದಾರೆ ಎಂದರು. ಐಟಿಐ ಪ್ರಶ್ನೆ ಪತ್ರಿಕೆ ಅದಲು-ಬದಲು ಆಗಿ ವಿದ್ಯಾರ್ಥಿಗಳ ನಪಾಸ್ ವಿಚಾರದ ಬಗ್ಗೆ ಮಾಹಿತಿ ಇಲ್ಲ, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.
ಹಾಗೇನಾದರೂ ಸಮಸ್ಯೆ ಆಗಿದ್ದರೆ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ ಎಂದರು. ಲಾಕ್ಡೌನ್ ಉತ್ತಮವಾಗಿ ನಿರ್ವಹಣೆ ಮಾಡಿದ್ದು, ಲಾಕ್ಡೌನ್ ಅವಧಿ ಜೂನ್ 14ರವರೆಗೂ ಇದೆ. ಬಳಿಕ ಕೇಸ್ ಕಂಟ್ರೋಲ್ ಆದರೆ ಅನ್ಲಾಕ್ ಮಾಡುತ್ತೇವೆ ಎಂದು ತಿಳಿಸಿದರು.
ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ :ಉಪ ಚುನಾವಣೆಯಲ್ಲಿ ಉತ್ತಮ ಗೆಲುವು ಸಾಧಿಸಿದ ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ ಸಿಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ಅವರು ತಪ್ಪದೆ ಮಾತು ಉಳಿಸಿಕೊಳ್ಳುತ್ತಾರೆ. ಈ ಬಗ್ಗೆ ಸಂಶಯ ಬೇಡ ಅಂತ ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದರು.
ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಶಾಸಕ ಮುನಿರತ್ನ ಆಯೋಜಿಸಿದ್ದ ಒಂದು ಲಕ್ಷ ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಲಗ್ಗೆರೆಯಲ್ಲಿ ಡಿಸಿಎಂ ಚಾಲನೆ ನೀಡಿದ್ರು. ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಿದ್ದ ಕಿಟ್‌ಗಳನ್ನು ಹಂಚಿರುವ ಮುನಿರತ್ನ ಕೆಲಸ ಶ್ಲಾಘನೀಯ ಅಂದರು.
ಒಂದು ಲಕ್ಷ ರೇಷನ್ ಕಿಟ್ ವಿತರಣೆ ಅಂದರೆ ಸಣ್ಣ ಸಂಗತಿ ಅಲ್ಲ. ಯಾರೇ ಬಂದರೂ ರೇಷನ್ ಕೊಡಲಾಗುತ್ತಿದೆ. ಇದು ಖಂಡಿತವಾಗಿಯೂ ಒಳ್ಳೆಯ ಕೆಲಸ ಎಂದರು. ನಗರದಲ್ಲಿ ಯಾರೂ ಹಸಿವಿಂದ ಇರಬಾರದು.
ಎಲ್ಲರಿಗೂ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ಮುನಿರತ್ನ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಪಾಲಿಸುತ್ತಾ ಬಂದು ಕಿಟ್‌ಗಳನ್ನು ಸ್ವೀಕರಿಸುತ್ತಿದ್ದಾರೆಂದು ಡಿಸಿಎಂ ಹೇಳಿದರು.