ಕರ್ನಾಟಕ

karnataka

ETV Bharat / state

ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗಳ ಪರಿಶೀಲನೆಗೆ ಮುಂದಾದ ಶಾಸಕ ಮುನಿರತ್ನ - ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ

ಯಾವುದೇ ಸಂದರ್ಭದಲ್ಲೂ ನಿಮ್ಮ ಸೇವೆಗೆ ನಾನು ಸಿದ್ಧವಾಗಿದ್ದೇನೆ. ಏನೇ ಸಮಸ್ಯೆಗಳಿದ್ದರೂ ನನ್ನನ್ನು ಸಂಪರ್ಕಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿದ್ದಾರೆ..

mla-muniratna-check-on-hospitals-wearing-ppe-kit-in-bangalore
ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗಳ ಪರಿಶೀಲನೆಗೆ ಮುಂದಾದ ಶಾಸಕ ಮುನಿರತ್ನ

By

Published : Apr 21, 2021, 7:58 PM IST

ಬೆಂಗಳೂರು :ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಿಪಿಯಿ ಕಿಟ್ ಧರಿಸಿ ಯಶವಂತಪುರದ ಬಿಬಿಎಂಪಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮಲ್ಲೇಶ್ವರದಲ್ಲಿರುವ ನಾರ್ತ್ ಸೈಡ್ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸೇರಿ ‌ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಿದರು.

ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗಳ ಪರಿಶೀಲನೆಗೆ ಮುಂದಾದ ಶಾಸಕ ಮುನಿರತ್ನ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಆತ್ಮೀಯ ಬಂಧುಗಳೇ, ನೀವು ಕೋವಿಡ್-19 ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಆತಂಕಪಡುವ ಅಗತ್ಯವಿಲ್ಲ. ಯಾವುದೇ ಸಂದರ್ಭದಲ್ಲೂ ನಿಮ್ಮ ಸೇವೆಗೆ ನಾನು ಸಿದ್ಧವಾಗಿದ್ದೇನೆ. ಏನೇ ಸಮಸ್ಯೆಗಳಿದ್ದರೂ ನನ್ನನ್ನು ಸಂಪರ್ಕಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿದ್ದಾರೆ.

ಸಹಾಯವಾಣಿ ಕೂಡ ನೀಡಿದ್ದು ಸಹಾಯ ಬೇಕಿರುವವರು ಸಂಪರ್ಕಿಸಬಹುದು

ಮೊಬೈಲ್ ನಂಬರ್‌ಗಳು-

9148694444
9740284444
9148038888
9148078888

For All Latest Updates

ABOUT THE AUTHOR

...view details