ಬೆಂಗಳೂರು:ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧ ನೆರೆ ರಾಜ್ಯಗಳಲ್ಲಿ ಸಿಲುಕಿರುವ ಕಲಬುರಗಿ ಜಿಲ್ಲೆಯ ಕಾರ್ಮಿಕರನ್ನು ವಾಪಸ್ ಕರೆ ತರವಂತೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಕಲಬುರಗಿಯ ಕಾರ್ಮಿಕರನ್ನು ಕರೆತರುವಂತೆ ಕೋರಿ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಲಾಕ್ಡೌನ್ ಬಳಿಕ ನೆರೆ ರಾಜ್ಯಗಳಲ್ಲಿ ಸಿಲುಕಿರುವ ಕಲಬುರಗಿ ಮೂಲದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರೆ ದುರ್ಬಲ ವರ್ಗದ ಜನರನ್ನು ಸುರಕ್ಷಿತವಾಗಿ ಜಿಲ್ಲೆಗೆ ವಾಪಸ್ ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿಎಂ ನವಾಜ್ ಅವರಿದ್ದ ಪೀಠ ವಿಚಾರಣೆ ನಡೆಸಿತು.