ಬೆಂಗಳೂರು: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ಕೊಟ್ಟಿದ್ದಿರಾ. ಆದರೆ, ಪುನೀತ್ ರಾಜ್‍ಕುಮಾರ್ ನಟಿಸಿರುವ ಕೊನೆಯ ಚಿತ್ರ 'ಜೇಮ್ಸ್‌ಗೆ ಯಾಕೆ ವಿನಾಯಿತಿ ನೀಡಲು ಮೀನಾಮೇಷ ಎಣಿಸುತ್ತಿರುವುದು ಎಂದು ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 'ದಿ ಕಾಶ್ಮೀರ್ ಫೈಲ್ಸ್'ಗೆ ತೆರಿಗೆ ವಿನಾಯಿತಿ ಕೊಟ್ಟಿದೆ. ಆದರೆ, 'ಜೇಮ್ಸ್' ಚಿತ್ರಕ್ಕೆ ತೆರಿಗೆ ವಿನಾಯಿತಿ ಕೊಡಲು ಯಾಕೆ ಹಿಂಜರಿಯುತ್ತಿದೆ ಎಂದರು.