ಬೆಂಗಳೂರು :ಜನಪ್ರತಿನಿಧಿಗಳನ್ನು ಕೊರೊನಾ ಸೋಂಕು ಬಿಟ್ಟಿಲ್ಲ. ಇಂದು ಬಿಜೆಪಿಯ ಇಬ್ಬರು ಶಾಸಕರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.
ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಕೊರೊನಾ ತಪಾಸಣೆಗೊಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಸಂಪರ್ಕಕ್ಕೆ ಬಂದವರು ಎಚ್ಚರವಾಗಿರಿ ಅಥವಾ ಕೊರೊನಾ ತಪಾಸಣೆ ಮಾಡಿಸಿಕೊಳ್ಳಿ ಎಂದು ಶಾಸಕ ರವಿ ಸುಬ್ರಮಣ್ಯ ಮನವಿ ಮಾಡಿದ್ದಾರೆ.
ಇನ್ನೊಂದೆಡೆ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಕೂಡ ಕೊರೊನಾ ಸೋಂಕಿತರಾಗಿದ್ದಾರೆ.
ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದ್ದಾರೆ.