ಬೆಂಗಳೂರು : "ನನಗೆ ಇನ್ಸಲ್ಟ್ ಮಾಡ್ತೀರಾ?" ಎಂದು ಸಿಎಂ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಮೇಲೆ ಶುಕ್ರವಾರ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕರ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ, ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ.