ಬೆಂಗಳೂರು :ಬಿ ಎಸ್ ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷ ಸಿಎಂ.. ಇದು ಬಿಎಸ್ವೈ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಸ್ಪಷ್ಟನುಡಿ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸರ್ಕಾರದ ಪೂರ್ಣಾವಧಿ ಮುಗಿಸುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎದೆ ಬಗೆದು ತೋರಿಸಬೇಕಾ? ಖಂಡಿತವಾಗಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವರ್ಣರಂಜಿತವಾಗಿ ತೋರಿಸುತ್ತೀರಿ ಎಂದು ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು. ಮುಂದುವರೆದು ಮಾತನಾಡಿದ ಅವರು, ಇಬ್ಬರೂ ನಾಯಕರನ್ನು ಪಕ್ಷ ಆಯ್ಕೆ ಮಾಡಿದೆ. ಅವರು ತಳಮಟ್ಟದಿಂದ ಕೆಲಸ ಮಾಡಿದ್ದಾರೆ. ಹೈಕಮಾಂಡ್ ಹೇಳಿದ ಮೇಲೆ ಒಪ್ಪಿಕೊಳ್ಳಲೇಬೇಕು ಎಂದರು.