ಬೆಂಗಳೂರು:ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮತ ಚಲಾಯಿಸಿದ್ದಾರೆ.
ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ ಶಾಸಕ ಶರತ್ ಬಚ್ಚೇಗೌಡ ಹೇಳಿದ್ದೇನು? - Hoskote MLA Sarath Bachegowda
ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇನೆ, ಅದು ನನ್ನ ಹಕ್ಕು. ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾಯಿಸಿದ್ದೇನೆ. ಗೌಪ್ಯ ಮತದಾನವಾಗಿರುವುದರಿಂದ ಯಾರಿಗೆ ಮತ ಚಲಾಯಿಸಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ಶಾಸಕ ಶರತ್ ಬಚ್ಚೇಗೌಡ
ಶಾಸಕರಾದ ಬಳಿಕ ಮೊದಲ ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಂಡ ಅವರು, ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದರು. ಬಳಿಕ ಮಾತನಾಡಿ, ಒಬ್ಬ ಶಾಸಕನ ಮೇಲಿರುವ ಜವಾಬ್ದಾರಿ ಇವತ್ತು ವಿಧಾನಮಂಡಲಕ್ಕೆ ಬಂದಾಗ ನನಗೆ ಅನುಭವವಾಯಿತು. ಇಂದು ಪವಿತ್ರ ಸ್ಥಳಕ್ಕೆ ಬಂದಿದ್ದೇನೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇನೆ, ಅದು ನನ್ನ ಹಕ್ಕು. ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಗೌಪ್ಯ ಮತದಾನವಾಗಿರುವುದರಿಂದ ಯಾರಿಗೆ ಮತ ಚಲಾಯಿಸಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.