ಯಲಹಂಕ :ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತು ಕುಳ್ಳದೇವರಾಜು ವಿರುದ್ಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಹಿನ್ನೆಲೆ ನಗರದ ಪೊಲೀಸ್ ಠಾಣೆಗೆ ಗೋಪಾಲಕೃಷ್ಣ ಹಾಜರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಳ್ಳದೇವರಾಜ್ ನೀಡಿದ ಕ್ಷಮಾಪಣೆ ಪತ್ರ ಮತ್ತು ಸಂಚು ನಡೆಸಿದ ವಿಡಿಯೋ ಇರುವ ಪೆನ್ ಡ್ರೈವ್ ಅನ್ನು ಪೊಲೀಸರಿಗೆ ವಿಶ್ವನಾಥ್ ನೀಡಿದ್ದಾರೆ.
30 ನಿಮಿಷಗಳ ವಿಡಿಯೋವನ್ನು ಪರಿಶೀಲನೆ ನಡೆಸಿರುವ ಪೊಲೀಸರು, ಇಂದು ವಿಚಾರಣೆಗಾಗಿ ಗೋಪಾಲಕೃಷ್ಣರನ್ನು ರಾಜಾನುಕುಂಟೆ ಪೊಲೀಸ್ ಠಾಣೆಗೆ ಕರೆದಿದ್ದರು. ಅದರಂತೆ ಬೆಳಿಗ್ಗೆ 9 ಗಂಟೆಗೆ ಗೋಪಾಲಕೃಷ್ಣ ಪೊಲೀಸ್ ಠಾಣೆಗೆ ತೆರಳಿದ್ದಾರೆ.