ಕರ್ನಾಟಕ

karnataka

ETV Bharat / state

ಬಿಜೆಪಿಯಲ್ಲಿ ನಿಲ್ಲದ ಅಸಮಾಧಾನದ ಹೊಗೆ: ಶಾಸಕಾಂಗ ಪಕ್ಷದ ಸಭೆ ಕರೆಯಲು ಶಾಸಕ ಸುನೀಲ್ ಕುಮಾರ್ ಒತ್ತಾಯ - Bangalore

ಯಡಿಯೂರಪ್ಪ ರಾಜೀನಾಮೆ ಹೇಳಿಕೆ, ಸಹಿ ಸಂಗ್ರಹ ಅಭಿಯಾನ, ಹೈಕಮಾಂಡ್ ಸ್ಪಷ್ಟೀಕರಣ ಈ ಎಲ್ಲಾ ವಿದ್ಯಮಾನಗಳ ನಡುವೆ ಪಕ್ಷದಲ್ಲಿ ಎಲ್ಲವೂ ಸರಿಯಾಯಿತು ಎನ್ನುತ್ತಿದ್ದಂತೆ ಶಾಸಕಾಂಗ ಪಕ್ಷದ ಸಭೆ ಕೂಗು ಕೇಳಿ ಬಂದಿದೆ.

MLA Sunil Kumar
ಶಾಸಕ ಸುನೀಲ್ ಕುಮಾರ್

By

Published : Jun 8, 2021, 1:27 PM IST

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಅಸಮಾಧಾನದ ಹೊಗೆಯಾಡುವುದು ನಿಂತಿಲ್ಲ. ಶಾಕಸಾಂಕಗ ಪಕ್ಷದ ಸಭೆ ಕರೆಯುವಂತೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದನ್ನು ಮತ್ತೊಮ್ಮೆ ಅನಾವರಣಗೊಳಿಸಿದೆ.

ಯಡಿಯೂರಪ್ಪ ರಾಜೀನಾಮೆ ಹೇಳಿಕೆ, ಸಹಿ ಸಂಗ್ರಹ ಅಭಿಯಾನ, ಹೈಕಮಾಂಡ್ ಸ್ಪಷ್ಟೀಕರಣ ಈ ಎಲ್ಲಾ ವಿದ್ಯಮಾನಗಳ ನಡುವೆ ಪಕ್ಷದಲ್ಲಿ ಎಲ್ಲವೂ ಸರಿಯಾಯಿತು ಎನ್ನುತ್ತಿದ್ದಂತೆ ಶಾಸಕಾಂಗ ಪಕ್ಷದ ಸಭೆ ಕೂಗು ಕೇಳಿ ಬಂದಿದೆ. ಶಾಸಕ ಸುನೀಲ್ ಕುಮಾರ್ ಟ್ವೀಟ್ ಮೂಲಕ ಪರೋಕ್ಷವಾಗಿ ಶಾಸಕಾಂಗ ಸಭೆ ಕರೆಯುವ ಪ್ರಸ್ತಾಪ ಮಾಡಿದ್ದಾರೆ.

ಕಳೆದ 3 ದಿನದಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ. ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಟ್ವೀಟ್ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಟ್ಯಾಗ್ ಮಾಡಿದ್ದಾರೆ.

ಓದಿ:ಹಸುವಿನಂತಿರುವ ವ್ಯಾಘ್ರ ಮುಖದ ಅಧಿಕಾರಿ ರೋಹಿಣಿ: ಸಾ.ರಾ.ಮಹೇಶ್ ವಾಗ್ದಾಳಿ

ABOUT THE AUTHOR

...view details