ಕರ್ನಾಟಕ

karnataka

ETV Bharat / state

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ ಆರ್ ವಿಶ್ವನಾಥ್ ನೇಮಕ ಖಚಿತ!

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರ ನೇಮಕ ಬಹುತೇಕ ಖಚಿತವಾಗಿದೆ.

ಎಸ್.ಆರ್.ವಿಶ್ವನಾಥ್ ಸಿಎಂ ರಾಜಕೀಯ ಕಾರ್ಯದರ್ಶಿ

By

Published : Aug 30, 2019, 2:39 PM IST

ಬೆಂಗಳೂರು:ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರ ನೇಮಕ ಬಹುತೇಕ ಖಚಿತವಾಗಿದೆ. ನಾಳೆ ಅಧಿಕೃತವಾಗಿ ಸರ್ಕಾರಿ ಆದೇಶ ಹೊರಬೀಳುವ ನಿರೀಕ್ಷೆ ಇದೆ.

ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಮನವೊಲಿಸುವಲ್ಲಿ ಸಿಎಂ ಬಿಎಸ್​ವೈ ಸಫಲರಾಗಿದ್ದು, ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನಕ್ಕೂ ಮುನ್ನ, ಅತೃಪ್ತ ಶಾಸಕರನ್ನು ರೆಸಾರ್ಟ್‌ನಲ್ಲಿಟ್ಟು ಪರಿಸ್ಥಿತಿ ನಿಭಾಯಿಸಿದ ತಂಡದಲ್ಲಿ ವಿಶ್ವನಾಥ್ ಕೂಡ ಒಬ್ಬರಾಗಿದ್ದು, ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿಯೂ ಗುರುತಿಸಿಕೊಂಡಿದ್ದರು. ಸಚಿವ ಸ್ಥಾನ ವಂಚಿತ ವಿಶ್ವನಾಥ್ ಅವರಿಗೆ ಇದೀಗ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಬಿ ಎಸ್ ಯಡಿಯೂರಪ್ಪ ನೇಮಕ ಮಾಡಿಕೊಂಡಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಸದ್ಯ ಪಕ್ಷದಲ್ಲಿ ಭುಗಿಲೆದ್ದಿರುವ ಸಚಿವಾಕಾಂಕ್ಷಿಗಳ ಅಸಮಾಧಾನ ಶಮನಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸಂಸದೀಯ ಕಾರ್ಯದರ್ಶಿ ನೇಮಕದ ಮೂಲಕ ಅತೃಪ್ತಿ ದಮನಕ್ಕೆ ಸಿಎಂ ನಿರ್ಧರಿಸಿದ್ದಾರೆ. ಆರು ಶಾಸಕರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತೆ ಆರು ಶಾಸಕರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ನೀಡಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗುತ್ತದೆ. ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ರಾಮಪ್ಪ ಲಮಾಣಿ, ಎಸ್.ಅಂಗಾರ, ಎಂ ಪಿ ಕುಮಾರಸ್ವಾಮಿ,ರಾಮದಾಸ್,ಪೂರ್ಣಿಮಾ ಶ್ರೀನಿವಾಸ್,ರೂಪಾಲಿ ನಾಯಕ್,ಸತೀಶ್ ರೆಡ್ಡಿ,ಕಳಕಪ್ಪ ಬಂಡಿ,ಶಿವನಗೌಡ ನಾಯಕ್,ದತ್ತಾತ್ರೇಯ ಪಾಟೀಲ್ ರೇವೂರ ಸೇರಿದಂತೆ 12ಬಿಜೆಪಿ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲು ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದು,ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟ ಸಾಧ್ಯತೆ ಇದೆ ಎನ್ನಲಾಗಿದೆ.

ABOUT THE AUTHOR

...view details