ಬೆಂಗಳೂರು: ಕೋವಿಡ್ ವೇಳೆ ಕಾಯಕ ಮರೆತು ಕಳಂಕದ ಕೆಲಸ ಮಾಡಿದ ಭ್ರಷ್ಟರ ಮಾಹಿತಿಯನ್ನು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಕೇಂದ್ರ ನಾಯಕರಿಗೆ ನೀಡಿದರೆ ಏನು ಪ್ರಯೋಜನ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ನಾಯಕರ ಸಹಕಾರವಿಲ್ಲದೇ 40 ಸಾವಿರ ಕೋಟಿ ರೂ. ಕೋವಿಡ್ ಭ್ರಷ್ಟಾಚಾರ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ನಡೆದಿರುತ್ತಾ?. ಕೋವಿಡ್ ಭ್ರಷ್ಟಾಚಾರದ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮಲ್ಲಿರುವ ಮಾಹಿತಿ, ದಾಖಲೆಗಳನ್ನು ಕೇಂದ್ರ ನಾಯಕರಿಗೆ ನೀಡುವ ಬದಲು ಜಸ್ಟಿಸ್ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಹಿಂದಿನ ಸರ್ಕಾರದಲ್ಲಿ ಕೊರೊನಾ ವೇಳೆ ₹40 ಸಾವಿರ ಕೋಟಿ ಅವ್ಯವಹಾರ: ಯತ್ನಾಳ್ ಗಂಭೀರ ಆರೋಪ