ಬೆಂಗಳೂರು: ಎಸಿಬಿ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ್ ಜಮೀರ್ ಅಹ್ಮದ್ ಖಾನ್ ಸಮನ್ಸ್ ಮುಖಾಂತರ ಎಸಿಬಿ ಅಧಿಕಾರಿಗಳು ದಾಖಲೆಗಳು ಕೇಳಿದ್ದರು. ದಾಖಲೆಗಳನ್ನ ಸಲ್ಲಿಕೆ ಮಾಡಿದ್ದೇನೆ ಎಂದಿದ್ದಾರೆ.
ಮನೆ ನಿರ್ಮಾಣ ಸಂಬಂಧ ದಾಖಲೆಗಳನ್ನ ಕೊಟ್ಟಿದ್ದೇನೆ. ಬಿಜೆಪಿ ಸರ್ಕಾರ ಇರುವ ಕಡೆ ಕಾಂಗ್ರೆಸ್ ನಾಯಕರಿಗೆ ಹೀಗೆ ತೊಂದರೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ನಾನು ಮತ್ತು ನಮ್ಮ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನೇ ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದರು.