ಬೆಂಗಳೂರು: ಸಚಿವ ಸಂಪುಟ ಪುನರಚನೆ ವಿಚಾರ ಮುನ್ನಲೆಗೆ ಬರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡುವ ಮೂಲಕ ಲಾಬಿ ಶುರು ಮಾಡಿದ್ದಾರೆ.
ಸಂಪುಟ ಪುನರಚನೆ; ಸಿಎಂ ಜೊತೆ ಮಾತುಕತೆ ನಡೆಸಿದ ಆಕಾಂಕ್ಷಿಗಳು - Latest etv bharat news
ಸಚಿವ ಸಂಪುಟ ಪುನರಚನೆ ಈಗ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಪ್ರಮುಖ ಸುದ್ದಿ. ಪಕ್ಷದ ರಾಷ್ಟ್ರೀಯ ವರಿಷ್ಟರ ಅನುಮತಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಒಂದೆಡೆ ಕಾಯುತ್ತಿದ್ದರೆ ಮತ್ತೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ಜೋರಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ರಾಜುಗೌಡ ಹಾಗೂ ಶಂಕರ್ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿದರು. ಕೆಲಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು.
ಸಚಿವ ಸಂಪುಟ ವಿಸ್ತರಣೆ ವೇಳೆ ನಮ್ಮ ಹೆಸರನ್ನೂ ಪರಿಗಣಿಸುವಂತೆ ಮನವಿ ಮಾಡಿದರು. ನಂತರ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಜೊತೆಯಲ್ಲಿಯೂ ಮಾತುಕತೆ ನಡೆಸಿದರು. ಶಿರಾ ಗೆಲುವಿಗೆ ಅಭಿನಂದನೆ ಸಲ್ಲಿಸಿ ಸಂಪುಟ ವಿಸ್ತರಣೆ, ಸಿಎಂ ದೆಹಲಿ ಪ್ರವಾಸ ಸಾಧ್ಯತೆ ಕುರಿತು ಮಾತುಕತೆ ನಡೆಸಿದರು. ನಿನ್ನೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿದ್ದ ಆಕಾಂಕ್ಷಿಗಳು, ಇಂದು ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದರು.