ಕರ್ನಾಟಕ

karnataka

By

Published : May 26, 2021, 12:29 PM IST

ETV Bharat / state

ಖಾಸಗಿ ಶಾಲೆಗಳ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯ

ಇವೆಲ್ಲವನ್ನೂ ಮುಖ್ಯಮಂತ್ರಿಳಿಗೆ ಮನದಟ್ಟು ಮಾಡಿಕೊಟ್ಟಿದ್ದು, ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಮನವಿ ಮಾಡಿದ್ದೇವೆ. ಕೂಡಲೇ ಪರಿಶೀಲಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ..

puttanna
ಪುಟ್ಟಣ್ಣ,

ಬೆಂಗಳೂರು : ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಕೋವಿಡ್ ವಿಶೇಷ ಪ್ಯಾಕೇಜ್ ನೀಡುವಂತೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿತು.

ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಅಲ್ಲಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಕೂಡಲೇ ಖಾಸಗಿ ಶಾಲೆಗಳ ಶಿಕ್ಷಕರು, ಶಿಕ್ಷಕೇತರರ ನೆರವಿಗೆ ಸರ್ಕಾರ ಧಾವಿಸಬೇಕು. ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿತು. ಮನವಿ ಆಲಿಸಿದ ಸಿಎಂ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಕೆ ಎಸ್‌ ಪುಟ್ಟಣ್ಣ ಮಾತನಾಡಿರುವುದು

ಸಿಎಂ ಭೇಟಿ ನಂತರ ಮಾತನಾಡಿದ ಪರಿಷತ್ ಸದಸ್ಯ ಪುಟ್ಟಣ್ಣ, ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪರಿಷತ್ ಸದಸ್ಯರಾದ ನಾರಾಯಣಸ್ವಾಮಿ, ಎಸ್.ವಿ ಸಂಕನೂರು, ಅರುಣ್ ಶಹಾಪುರ್, ಚಿದಾನಂದಗೌಡ ಎಲ್ಲರೂ ಸೇರಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇವೆ.

ಇಂದಿನ‌ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಮತ್ತು ಶಿಕ್ಷಕೇತರರು, ಆಡಳಿತ ಮಂಡಳಿ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿರುವುದನ್ನು ತಿಳಿಸಿದ್ದೇವೆ. ಕಳೆದ ವರ್ಷದಿಂದ ಶುಲ್ಕ ಕಟ್ಟಲಾಗದ ಸ್ಥಿತಿಯಲ್ಲಿ ಪೋಷಕರಿದ್ದಾರೆ.

ಹಾಗಾಗಿ, ಆ ಕಡೆ ಶುಲ್ಕ ಕಟ್ಟಿಸಿಕೊಳ್ಳಲಾಗದ, ಈ ಕಡೆ ವೇತನ ನೀಡಲಾಗದ ಸ್ಥಿತಿಯಲ್ಲಿ ಆಡಳಿತ ಮಂಡಳಿಗಳಿವೆ. ಇದರಿಂದ ಶಿಕ್ಷಕರು, ಸಿಬ್ಬಂದಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇವೆಲ್ಲವನ್ನೂ ಮುಖ್ಯಮಂತ್ರಿಳಿಗೆ ಮನದಟ್ಟು ಮಾಡಿಕೊಟ್ಟಿದ್ದು, ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಮನವಿ ಮಾಡಿದ್ದೇವೆ. ಕೂಡಲೇ ಪರಿಶೀಲಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಕೊರೊನಾ ಜಾಗೃತಿ ಮೂಡಿಸಲು ಮುಂದೆ ಬಂದ ಸಾರಿಗೆ ಸಂಸ್ಥೆ ನೌಕರರು

ಮುಖ್ಯಮಂತ್ರಿಗಳು ಖಾಸಗಿ ಶಾಲೆ ಶಿಕ್ಷಕರ, ಸಿಬ್ಬಂದಿಯ ಕೈಬಿಡಲ್ಲ ಎನ್ನುವ ನಂಬಿಕೆ ಇದೆ. ನಮ್ಮ ಸಮಸ್ಯೆಗೆ ಸಹಾನಭೂತಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಅವರ ಮೇಲೆ ನಾವು ನಂಬಿಕೆ ಇರಿಸಿದ್ದೇವೆ. ಖಾಸಗಿ ಶಾಲೆ ಸಿಬ್ಬಂದಿ ಬೇಡಿಕೆ ಕಡೆಗಣಿಸದೆ ವಿಶೇಷ ಪ್ಯಾಕೇಜ್ ನೀಡುವ ವಿಶ್ವಾಸವಿದೆ ಎಂದರು.

ABOUT THE AUTHOR

...view details