ಕರ್ನಾಟಕ

karnataka

ETV Bharat / state

ಕೋವಿಡ್ ನಿಯಂತ್ರಣಕ್ಕೆ ಸಂಪೂರ್ಣ ಲಾಕ್​​ಡೌನ್ ಅನಿವಾರ್ಯ: ಎನ್. ರವಿಕುಮಾರ್ - mlc ravikumar suggested lockdown

ಕೊರೊನಾ ತೀವ್ರತೆ ತಗ್ಗಿಸಲು ಸಂಪೂರ್ಣ ಲಾಕ್​ಡೌನ್​ ಮಾಡುವುದು ಸೂಕ್ತ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.

ravikumar
ravikumar

By

Published : May 7, 2021, 3:34 PM IST

ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಲಾಕ್​​ಡೌನ್ ಅನಿವಾರ್ಯ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ವಿಧಾನಸೌಧದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಜತೆಗೂಡಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಸಂಪೂರ್ಣ ಲಾಕ್​ಡೌನ್ ಅನಿವಾರ್ಯವಾಗಿದೆ. ಈ ಹಿಂದೆ ದೇಶಾದ್ಯಂತ ಜಾರಿಗೊಂಡಿದ್ದ ಲಾಕ್​ಡೌನ್ ಜಾರಿಯಾಗಲಿ ಎಂದರು. ಸಂಪೂರ್ಣ ಲಾಕ್​ಡೌನ್ ಆದರೆ ಕೋವಿಡ್ ನಿಯಂತ್ರಣ ಸಾಧ್ಯ. ಜನರ ಸಹಕಾರವೂ ಕೋವಿಡ್ ನಿಯಂತ್ರಣದಲ್ಲಿ ಅತ್ಯಗತ್ಯ. ಈ ನಿಟ್ಟಿನಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ್, ಪೊಲೀಸರು, ವೈದ್ಯರು ಕೋವಿಡ್​ಗೆ ಒಳಗಾಗುತ್ತಿದ್ದಾರೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪಕ್ಷದ ವತಿಯಿಂದಲೂ ಕೋವಿಡ್ ಸಂದರ್ಭದಲ್ಲಿ ಜನರಿಗೆ ಸಹಕಾರ ಮಾಡಲಾಗುತ್ತಿದೆ. ಆ್ಯಂಬುಲೆನ್ಸ್ ವ್ಯವಸ್ಥೆ ಮಾಡುವುದು, ಐಸೋಲೇಷನ್, ಟೆಲಿ ಮೆಡಿಸಿನ್ ಆರಂಭ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಪಕ್ಷದ ಹಿತೈಷಿ ವೈದ್ಯರ ಸಹಕಾರದಿಂದ ಹೌಸ್ ಐಸೋಲೇಷನ್ ಇದ್ದವರಿಗೆ ಸಹಾಯ ಮಾಡಲಾಗುತ್ತಿದೆ. 51 ಹೆಲ್ಪ್ ಲೈನ್ ಆರಂಭಿಸಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತ್ಯ ಸಂಸ್ಕಾರ ಮತ್ತಿತರ ಕಾರ್ಯಗಳಿಗೆ ಸಹಕಾರವನ್ನು ಕಾರ್ಯಕರ್ತರು ನೀಡುತ್ತಿದ್ದಾರೆ. ಸರ್ಕಾರದ ಕೆಲಸ ಕಾರ್ಯಗಳ ಜೊತೆಗೆ ಪಕ್ಷದಿಂದ ಸೇವಾ ಚಟುವಟಿಕೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ABOUT THE AUTHOR

...view details