ಕರ್ನಾಟಕ

karnataka

ETV Bharat / state

ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಉಗ್ರ ಕ್ರಮ: ಪ್ರತಿಭಟನಾಕಾರರಿಗೆ ಗೃಹ ಸಚಿವರ ಎಚ್ಚರಿಕೆ!

ಬೆಂಗಳೂರಿನ ಕಾವಲ್​ಭೈರ್​ ಸಂದ್ರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

basavaraj bommai statement
basavaraj bommai statement

By

Published : Aug 12, 2020, 12:44 AM IST

ಬೆಂಗಳೂರು:ಶಾಸಕ ಅಖಂಡ ಶ್ರೀನಿವಾಸ ಅವರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್​ ಹಾಕಿದ್ದಕ್ಕಾಗಿ ಆಕ್ರೋಶ ಭುಗಿಲೆದ್ದಿದ್ದು, ಶಾಸಕರ ಮನೆ ಮತ್ತು ಕಚೇರಿ ಮೇಲೆ ಕಲ್ಲು ತೂರಾಟದಂತಹ ಘಟನೆ ನಡೆದಿದೆ. ಸದ್ಯ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಇದೇ ವಿಚಾರವಾಗಿ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಮಾತನಾಡಿದ್ದು, ಪ್ರತಿಭಟನಾಕಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಪ್ರತಿಭಟನಾಕಾರರಿಗೆ ಗೃಹ ಸಚಿವರ ಎಚ್ಚರಿಕೆ

ಯಾವುದೇ ಸಮಸ್ಯೆ ಇದ್ದರೂ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕು. ಅದರ ಬದಲಿಗೆ ಪುಂಡಾಟಿಕೆ, ಬೆಂಕಿ ಹಚ್ಚುವಂತಹ ಹಾಗೂ ಪ್ರತಿಭಟನೆ ನಡೆಸಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಹಿರಿಯ ಪೊಲೀಸ್​ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣ ಮಾಡಲು ಪೊಲೀಸರಿಗೆ ಎಲ್ಲ ರೀತಿಯ ಅಧಿಕಾರ ನೀಡಲಾಗಿದೆ.

ಎಷ್ಟೇ ದೊಡ್ಡವರಾಗಿದ್ದರೂ ಕಾನೂನು ಕೈಗೆತ್ತಿಕೊಂಡಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ಸಹ ಇಂತಹ ಘಟನೆ ನಡೆದಾಗ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬೇರೆ ಯಾವುದೇ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details