ಬೆಂಗಳೂರು :ಐ-ಪೋನ್ ಸೇರಿದಂತೆ ದುಬಾರಿ ಬೆಲೆಯ ಮೊಬೈಲ್ಗಳನ್ನ ಕ್ಷಣಾರ್ಧದಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬೈಕ್ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್! - mobile theft arrest in bengalore
ಇತ್ತೀಚೆಗೆ ಶಿವಮೊಗ್ಗದಿಂದ ಬೆಂಗಳೂರಿನ ಗಾಂಧಿನಗರಕ್ಕೆ ಬಂದು ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ..
![ಬೈಕ್ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್! SALMAN](https://etvbharatimages.akamaized.net/etvbharat/prod-images/768-512-9716393-536-9716393-1606738124434.jpg)
ಪಾದರಾಯನಪುರ ನಿವಾಸಿ ಸಲ್ಮಾನ್ ಅಲಿಯಾಸ್ ಉಮರ್ ಬಂಧಿತ ಮೊಬೈಲ್ ಕಳ್ಳ. ಹೆಚ್ಚು ಬೆಲೆ ಬಾಳುವ ಮೊಬೈಲ್ ಫೋನ್ಗಳನ್ನೇ ಕಳ್ಳತನಕ್ಕೆ ಗುರಿಯಾಗಿಸಿಕೊಳ್ಳುತ್ತಿದ್ದ ಖದೀಮ, ಇತ್ತೀಚೆಗೆ ಶಿವಮೊಗ್ಗದಿಂದ ಬೆಂಗಳೂರಿನ ಗಾಂಧಿನಗರಕ್ಕೆ ಬಂದು ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದ.
ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕಿರಣ್ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಕದ್ದ ಮೊಬೈಲ್ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪಿ, ಬಂಧನಕ್ಕೂ ಮುನ್ನ ಬ್ಯಾಟರಾಯನಪುರ, ಚಂದ್ರಾಲೇಔಟ್, ವಿವಿ ಪುರಂ, ಶಂಕರಪುರಂ, ವಿಜಯನಗರ ಸೇರಿ ಹಲವು ನಗರದ ವಿವಿಧ ಠಾಣೆಗಳಲ್ಲಿ 19 ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸದ್ಯ ಬಂಧಿತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.