ಕರ್ನಾಟಕ

karnataka

ETV Bharat / state

ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ - ಕನಕದಾಸ ಜಯಂತಿ

ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮೋದಿ ಶಾಸಕರ ಭವನದ ಬಳಿ ಇರುವ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದರು.

modi
ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

By

Published : Nov 11, 2022, 10:41 AM IST

Updated : Nov 11, 2022, 11:08 AM IST

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಶಾಸಕರ‌ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ದೇವನಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಬೃಹತ್ ಪುತ್ಥಳಿ ಅನಾವರಣಗೊಳಿಸಲು ಸಿಲಿಕಾನ್ ಸಿಟಿಗೆ ಆಗಮಿಸಿರುವ ಪ್ರಧಾನಿ ಮೋದಿ, ಕನಕದಾಸ ಜಯಂತಿ ಪ್ರಯುಕ್ತ ಶಾಸಕರ ಭವನದಲ್ಲಿನ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಇದರ ಸಮೀಪದಲ್ಲೇ ಇರುವ ವಾಲ್ಮೀಕಿ ಪುತ್ಥಳಿಗೂ ಕೂಡ ಪುಷ್ಪನಮನ ಸಲ್ಲಿಸಿ, ವಂದಿಸಿದರು.

ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಇದನ್ನೂ ಓದಿ:ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ರಾಜ್ಯಪಾಲ, ಸಿಎಂರಿಂದ ಸ್ವಾಗತ

ಶ್ರೇಷ್ಠರ ಪ್ರತಿಮೆಗಳಿಗೆ ಪುಷ್ಪಾರ್ಚನೆ ವೇಳೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿ, ಕಾಗಿನೆಲೆ ನಿರಂಜನಾನಂದಪುರಿ ಸ್ವಾಮಿ, ರಾಜ್ಯಪಾಲ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Last Updated : Nov 11, 2022, 11:08 AM IST

ABOUT THE AUTHOR

...view details