ಬೆಂಗಳೂರು:ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಆಯೋಜಿಸಲಾಗಿದ್ದ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ಯುಗಾದಿ ಹಬ್ಬದ ಪ್ರಯುಕ್ತ ಒಂದು ದಿನ ಮುಂದೂಡಿಕೆಯಾಗಿದೆ ಎಂದು ಪಕ್ಷದ ರಾಜ್ಯ ಸಹ ವಕ್ತಾರ ಪ್ರಕಾಶ್ ಮಾಹಿತಿ ನೀಡಿದರು.
ಕರ್ನಾಟಕಕ್ಕೆ ಮೋದಿ ಒಂದು ದಿನ ಲೇಟಾಗಿ ಬರ್ತಾರೆ.. ಯಾಕೆ ಗೊತ್ತಾ? - undefined
ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಮೋದಿ ಅವರು ಕೈಗೊಂಡಿದ್ದ ರಾಜ್ಯ ಪ್ರವಾಸವನ್ನು ಒಂದು ದಿನಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪಕ್ಷದ ರಾಜ್ಯ ಸಹ ವಕ್ತಾರ ಪ್ರಕಾಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ಧಾರೆ.
ಮೂರು ಹಂತದ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೊದಲ ಹಂತದ ಪ್ರಚಾರ ಕಾರ್ಯಕ್ರಮ ಒಂದು ದಿನ ಮುಂದೂಡಿಕೆಯಾಗಿದೆ. ಏಪ್ರಿಲ್ 8ರಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ನಡೆಯಬೇಕಿದ್ದ ಮೋದಿ ರ‍್ಯಾಲಿಯನ್ನು ಯುಗಾದಿ ಹಬ್ಬದ ಪ್ರಯುಕ್ತ ಏಪ್ರಿಲ್ 9ರಂದು ಆಯೋಜಿಸಲಾಗಿದೆ.
ಏ.9ರಂದು ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಸಮಾವೇಶದಲ್ಲಿ ಭಾಗಿಯಾಗಿ ಪ್ರಚಾರ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ರಾಜ್ಯ ಸಹ ವಕ್ತಾರ ಪ್ರಕಾಶ್ ಮಾಹಿತಿ ನೀಡಿದರು.