ಎ ಪ್ರಸಾದ್.. ಹವಾಮಾನ ವಿಜ್ಞಾನಿ ಬೆಂಗಳೂರು : ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ತಿಂಗಳಿನಲ್ಲಿ ಅರ್ಭಟಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜುಲೈ 3 ರಿಂದ ಜುಲೈ 7ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಇನ್ನೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜುಲೈ 4ರಿಂದ ಜುಲೈ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜುಲೈ 5ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 48 ಗಂಟೆ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದೂ ಸುರಿದ ಮಳೆ: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ, ಕೊಡಗು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ವರ್ಷಧಾರೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡು, ಕರಾವಳಿಯ ಬಹುತೇಕ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಿದೆ.
ಇದನ್ನೂ ಓದಿ :ರಾಜ್ಯದಲ್ಲಿ ಮುಂಗಾರು ದುರ್ಬಲ: ಕೆಲವು ಜಿಲ್ಲೆಗಳಲ್ಲಿ ಹಾವು-ಏಣಿಯಾಟ