ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರ ನೇಮಕದಲ್ಲಿ ಇನ್ನು ವಿಳಂಬ ಸರಿಯಲ್ಲ, ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕದಲ್ಲಿ ಇನ್ನೂ ವಿಳಂಬ ಮಾಡಕೂಡದು. ವಿಳಂಬವಾದರೆ ಗೊಂದಲ ಹೆಚ್ಚಾಗುತ್ತದೆ. ಆದಷ್ಟು ಬೇಗ ಈ ಬಗ್ಗೆ ಹೈ ಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದು, ಬೇಗ ನೇಮಕ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಇದೇ ವೇಳೆ ತಿಳಿಸಿದರು.