ಕರ್ನಾಟಕ

karnataka

ETV Bharat / state

ಅನುಮತಿ ನಿರಾಕರಣೆ ನಡುವೆಯೂ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆಗೆ ಸಿದ್ಧತೆ

ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವಕಾಶ ನೀಡದೆ‌ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಆದರೂ ರಾಜಧಾನಿಯಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ.

Midday meal workers
ಬಿಸಿಯೂಟ ಕಾರ್ಯಕರ್ತೆಯರು

By

Published : Feb 3, 2020, 11:24 AM IST

ಬೆಂಗಳೂರು:ಬೆಂ. ಪಶ್ಚಿಮ ವಿಭಾಗ ಡಿಸಿಪಿಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಿಷೇಧಾಜ್ಞೆ ನಡುವೆಯೂ ಇಂದು ರಾಜ್ಯ ರಾಜಧಾನಿಯಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ

ಸದ್ಯ ಬೆಂಗಳೂರಿನ ಮೆಜೆಸ್ಟಿಕ್​ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ‌ ಆಗಮಿಸಿರುವ 1,000ಕ್ಕೂ ಹೆಚ್ಚಿನ ಬಿಸಿಯೂಟ ಕಾರ್ಯಕರ್ತೆಯರು, ರಾಜ್ಯದ ವಿವಿಧ ಜಿಲ್ಲೆಗಳಿಂದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಮೊಕ್ಕಾಂ ಹೂಡಿದ್ದಾರೆ.‌ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ಸಿಐಟಿಯು ವರಲಕ್ಷ್ಮೀ ನೇತೃತ್ವದಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಆದರೆ ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವಕಾಶ ನೀಡದೆ‌ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಸದ್ಯ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಮೂವರು ಎಸಿಪಿ, 6 ಇನ್ಸ್​ಪೆಕ್ಟರ್, 12 ಪಿಎಸ್​ಐ ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, 100ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ, 1 ವಾಟರ್ ಜೆಟ್, 2 ಬಿಎಂಟಿಸಿ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನು ಪಶ್ಚಿಮ‌ ವಿಭಾಗ ಡಿಸಿಪಿ ರಮೇಶ್ ಬಾನೋತ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ನಿಷೇಧಾಜ್ಞೆ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ABOUT THE AUTHOR

...view details