ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹಾವಳಿ: ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಪ್ರಕರಣ ಪತ್ತೆ
ರಾಜಧಾನಿ ಬೆಂಗಳೂರು ಒಂದರಲ್ಲೇ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಈಗಾಗಲೇ 1,207 ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ದಿನಕ್ಕೆ ಸರಾಸರಿ 8 ಹೊಸ ಬ್ಲ್ಯಾಕ್ ಫಂಗಸ್ ಪತ್ತೆಯಾಗ್ತಿದ್ದು, ಕಳೆದ 33 ದಿನಗಳಲ್ಲಿ 285 ಹೊಸ ಪ್ರಕರಣಗಳು ವರದಿಯಾಗಿವೆ.
ಬ್ಲ್ಯಾಕ್ ಫಂಗಸ್
By
Published : Aug 20, 2021, 11:13 AM IST
ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದರೆ ಇತ್ತ ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಆತಂಕ ಸೃಷ್ಟಿಸುತ್ತಿದೆ.
ರಾಜ್ಯದಲ್ಲಿ ಒಟ್ಟು 3,836 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ರಾಜಧಾನಿ ಬೆಂಗಳೂರು ಒಂದರಲ್ಲೇ 1,207 ಪ್ರಕರಣ ವರದಿಯಾಗಿದೆ. ಫಂಗಸ್ನಿಂದಾಗಿ 441 ಸೋಂಕಿತರು ಮೃತಪಟ್ಟಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲೇ 149 ಮಂದಿ ಕೊನೆಯುಸಿರೆಳೆದಿದ್ದು, ಸಾವಿನ ಪ್ರಮಾಣದಲ್ಲಿ ಮೊದಲ ಸ್ಥಾನದಲ್ಲಿದೆ. ನಂತರ ಧಾರವಾಡದಲ್ಲಿ 40, ಬಳ್ಳಾರಿಯಲ್ಲಿ 28, ದಕ್ಷಿಣ ಕನ್ನಡದಲ್ಲಿ 25 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಪಟ್ಟಿ
ರಾಜ್ಯದಲ್ಲಿ ದಿನಕ್ಕೆ ಸರಾಸರಿ 8 ಹೊಸ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗ್ತಿದ್ದು, ಕಳೆದ 33 ದಿನಗಳಲ್ಲಿ 285 ಹೊಸ ಪ್ರಕರಣಗಳು ಕಂಡುಬಂದಿದೆ. ಕೊರೊನಾ ನಡುವೆ ಬ್ಲ್ಯಾಕ್ ಫಂಗಸ್ ಸಂಖ್ಯೆ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣ.
ಬ್ಲ್ಯಾಕ್ ಫಂಗಸ್ ಹಾವಳಿಗೆ ತುತ್ತಾದ 5 ಜಿಲ್ಲೆಗಳು:
ಜಿಲ್ಲೆ
ಪ್ರಕರಣ
ಸಾವು
ಬೆಂಗಳೂರು
1207
149
ಧಾರವಾಡ
342
40
ವಿಜಯಪುರ
228
03
ಕಲಬುರಗಿ
213
24
ಬಳ್ಳಾರಿ
168
28
ಶಿಲೀಂಧ್ರ ಸೋಂಕು ಕಾಣಿಸಿಕೊಂಡವರಲ್ಲಿ ದೃಷ್ಟಿಹೀನತೆ ಕಾಡಲಿದ್ದು, ಆರಂಭದಲ್ಲಿ ಚಿಕಿತ್ಸೆ ಪಡೆಯದೇ ಇದ್ದರೆ ನಂತರದ ದಿನದಲ್ಲಿ ಮೆದುಳಿಗೆ ಸೋಂಕು ವ್ಯಾಪಿಸಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಇರಲಿದೆ. ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾದಾಗ ಅಥವಾ ಡಿಸ್ಚಾರ್ಜ್ ಸಮಯದಲ್ಲಿಯಾದರೂ ಎಂಡೋಸ್ಕೋಪಿ ಮಾಡುವುದು ಒಳ್ಳೆಯದು ಎಂದು ತಜ್ಞರು ಶಿಫಾರಸು ಮಾಡುತ್ತಾರೆ.