ಕರ್ನಾಟಕ

karnataka

ETV Bharat / state

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಡೆಂಟಲ್​ ಡಾಕ್ಟರ್​ ಮತ್ತು ಮಗಳ ಶವ ಪತ್ತೆ - ಈಟಿವಿ ಭಾರತ್ ಕನ್ನಡ ಸುದ್ದಿ

ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮನೆಯೊಂದರಲ್ಲಿ‌ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಬೆಂಗಳೂರು
ಬೆಂಗಳೂರು

By

Published : Aug 8, 2022, 3:26 PM IST

ಬೆಂಗಳೂರು:ನಗರದಲ್ಲಿಎರಡು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಬನಶಂಕರಿ ಪೊಲೀಸರು ಸ್ಥಳಕ್ಕೆ‌ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ದಂತ ವೈದ್ಯೆ ಶೈಮಾ (39) ಮಗಳು ಆರಾಧನ (10) ಮೃತರು. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮನೆಯೊಂದರಲ್ಲಿ‌ ತಾಯಿ-ಮಗಳು ವಾಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡ ರೀತಿಯಲ್ಲಿ ಶವಗಳು ಪತ್ತೆಯಾಗಿವೆ. ಈ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಶೈಮಾ (39) ಮಗಳು ಆರಾಧನ (10)

ಕೊಡಗಿನ ವಿರಾಜಪೇಟೆ ಮೂಲದ ಮೃತ ಶೈಮಾ ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಎರಡು ಕುಟುಂಬದವರನ್ನು ಒಪ್ಪಿಸಿ ಇಬ್ಬರು ವಿವಾಹವಾಗಿದ್ದರು. ಪತಿ ಸಹ ವೈದ್ಯನಾಗಿದ್ದು, ಮನೆಯ ಸಮೀಪದಲ್ಲಿ ಕ್ಲಿನಿಕ್‌ ಇಟ್ಟುಕೊಂಡಿದ್ದರು‌. ಎರಡು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದಿರುವಾಗ ಶೈಮಾ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಡೆತ್​ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಓದಿ:ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಮಾಡುತ್ತೇವೆ, ಆದ್ರೆ ಗಣೇಶ ಹಬ್ಬಕ್ಕಿಲ್ಲ ಅವಕಾಶ: ಶಾಸಕ ಜಮೀರ್

ABOUT THE AUTHOR

...view details