ಕರ್ನಾಟಕ

karnataka

ETV Bharat / state

ಕೆಂಪೇಗೌಡರ ಕಂಚಿನ ಪ್ರತಿಮೆ ಕಣ್ತುಂಬಿಕೊಂಡ ಶತಾಯುಷಿ ಸಾಲು ಮರದ ತಿಮ್ಮಕ್ಕ - ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಸಾಲುಮರದ ತಿಮ್ಮಕ್ಕ ಕಣ್ತುಂಬಿಕೊಂಡು ಖುಷಿಪಟ್ಟರು.

ಕೆಂಪೇಗೌಡರ ಕಂಚಿನ ಪ್ರತಿಮೆ ಕಣ್ತುಂಬಿಕೊಂಡ ಶತಯುಷಿ ಸಾಲು ಮರದ ತಿಮ್ಮಕ್ಕ
ಕೆಂಪೇಗೌಡರ ಕಂಚಿನ ಪ್ರತಿಮೆ ಕಣ್ತುಂಬಿಕೊಂಡ ಶತಯುಷಿ ಸಾಲು ಮರದ ತಿಮ್ಮಕ್ಕ

By

Published : Nov 13, 2022, 10:11 PM IST

Updated : Nov 13, 2022, 10:51 PM IST

ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಲೋಕಾರ್ಪಣೆಯಾದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ವೀಕ್ಷಣೆಗೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ.

ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರು ಇಂದು ಕೆಂಪೇಗೌಡ ಪ್ರತಿಮೆ ವೀಕ್ಷಿಸಿ ಖುಷಿ ಪಟ್ಟರು. ಮೂಲತಃ ಮಾಗಡಿ ತಾಲೂಕಿನವರೇ ಆದ ಸಾಲು ಮರದ ತಿಮ್ಮಕ್ಕ ಅವರು ಬೆಂಗಳೂರು ಕಟ್ಟಿದ ಧೀಮಂತ ನಾಯಕರ ಬೃಹತ್ ಪ್ರತಿಮೆಯನ್ನು ಕಣ್ತುಂಬಿಕೊಂಡರು.

ಕೆಂಪೇಗೌಡರ ಕಂಚಿನ ಪ್ರತಿಮೆ ಕಣ್ತುಂಬಿಕೊಂಡ ಶತಾಯುಷಿ ಸಾಲು ಮರದ ತಿಮ್ಮಕ್ಕ

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಬಳಿಕ ನಿತ್ಯ ಬಹಳಷ್ಟು ಜನರು ಆಗಮಿಸಿ, ಪ್ರತಿಮೆ ಕಣ್ತುಂಬಿಕೊಳ್ಳುತ್ತಿದ್ದಾರೆ.

(ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ರ ಸೊಬಗನ್ನು ಕಣ್ತುಂಬಿಕೊಳ್ಳಿ)

Last Updated : Nov 13, 2022, 10:51 PM IST

ABOUT THE AUTHOR

...view details