ಕರ್ನಾಟಕ

karnataka

ETV Bharat / state

ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ - Water Resources Minister Ramesh Jharakiholi

ಸಂಸದ ಬಿ.ವೈ.ರಾಘವೇಂದ್ರ ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

MP BY Raghavendra met Minister Ramesh Jharakiholi
ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

By

Published : Feb 18, 2020, 7:48 PM IST

ಬೆಂಗಳೂರು:ಸಂಸದ ಬಿ.ವೈ.ರಾಘವೇಂದ್ರ ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಸಚಿವ ರಮೇಶ್ ಜಾರಕಿಹೊಳಿಯನ್ನು ಅಭಿನಂದಿಸಿದ ಸಂಸದ ಬಿ.ವೈ.ರಾಘವೇಂದ್ರ

ಇದೇ ವೇಳೆ ಫೆಬ್ರವರಿ 24ರಂದು ಶಿವಮೊಗ್ಗ ಜಿಲ್ಲೆಗೆ ಅನುಮೋದನೆಗೊಂಡ ನೂತನ ನೀರಾವರಿ ಕಾಮಗಾರಿಗಳ ಉದ್ಘಾಟನೆಗೆ ಸಚಿವರನ್ನು ಆಹ್ವಾನಿಸಿದರು. ಜೊತೆಗೆ ಉಡುಗಣಿ-ತಾಳಗುಂದ ಹೊಸೂರು, ಹೊಸಳ್ಳಿ, ಮೂಡಿ ಮತ್ತು ಮೂಗೂರು ಕೆರೆಗಳಿಗೆ ನೀರು ತುಂಬಿಸುವ ನೀರಾವರಿ ಯೋಜನೆ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ ಮುಂದಿನ ಸಾಲಿನಲ್ಲಿ ಪೂರ್ಣಗೊಳಿಸುವ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ನೀರಾವರಿ ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details