ಬೆಂಗಳೂರು : ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ತಮ್ಮ ನಿವಾಸದ ಮೇಲಿನ ಸಿಬಿಐ ದಾಳಿ ಕುರಿತು ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ: ಸಿಬಿಐ ದಾಳಿ ಕುರಿತು ಡಿ.ಕೆ ಸುರೇಶ್ ಪ್ರತಿಕ್ರಿಯೆ - ಡಿ.ಕೆ ಸಹೋದರರ ಮನೆ ಮೇಲೆ ಸಿಬಿಐ ದಾಳಿ
ಎಲ್ಲ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ ಎಂದು ಸಂಸದ ಡಿ.ಕೆ ಸುರೇಶ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ. ಈ ಎಲ್ಲ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದಿದ್ದಾರೆ.
ಅಕ್ರಮ ಆಸ್ತಿ ಗಳಿಗೆ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಹೋದರ ಸಂಸದ ಡಿ.ಕೆ ಸುರೇಶ್ ನಿವಾಸ ಸೇರಿದ ಒಟ್ಟು 15 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಇದನ್ನು ವಿರೋಧಿಸಿ ರಾಜ್ಯಾದ್ಯಂತ ಅಭಿಮಾನಿಗಳು ತೀವ್ರ ಪ್ರತಿಭಟನೆ ಮಾಡುತ್ತಿದ್ದಾರೆ.