ಕರ್ನಾಟಕ

karnataka

ETV Bharat / state

ಸರ್ಕಾರ, ಪಕ್ಷಕ್ಕಿಂತ ಸೋತವರು ದೊಡ್ಡವರಲ್ಲ: ಎಂ.ಪಿ. ರೇಣುಕಾಚಾರ್ಯ - cabinet expansion

ಮುಖ್ಯಮಂತ್ರಿಗಳ ಜೊತೆಯಲ್ಲಿಯೂ ಚರ್ಚೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಪುನಾರಚನೆ ಯಾವಾಗ ಮಾಡುತ್ತಾರೋ ಕಾದು ನೋಡೋಣ, ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ds
ಕ್ಯಾಬಿನೆಟ್​ ವಿಸ್ತರಣೆಯ ಬಗ್ಗೆ ಎಂಪಿ ರೇಣುಕಾಚಾರ್ಯ

By

Published : Nov 22, 2020, 1:58 PM IST

ಬೆಂಗಳೂರು: ಸರ್ಕಾರ, ಪಕ್ಷಕ್ಕಿಂತ ಸೋತವರು ದೊಡ್ಡವರಲ್ಲ. ಪದೇ ಪದೇ ಅವರ ಹೆಸರನ್ನು ಹೇಳುವುದು ಸೂಕ್ತವಲ್ಲ. ಈ ಸಂಬಂಧ ಶಾಸಕರ ಭಾವನೆಗಳನ್ನು ಎಲ್ಲಿ ತಲುಪಿಸಬೇಕೋ, ಎಲ್ಲಿ ಮಾತನಾಡಬೇಕೋ ನಾನು ಅಲ್ಲಿ ಹೇಳಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಕ್ಯಾಬಿನೆಟ್​ ವಿಸ್ತರಣೆಯ ಬಗ್ಗೆ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ

ಸಿಎಂ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಸೇರಿ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿ ಹೊನ್ನಾಳಿ, ನ್ಯಾಮತಿ ಬಗ್ಗೆ ಮಾತ್ರ ಹೇಳಬಲ್ಲೆ. ರಾಜ್ಯಮಟ್ಟದ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ. ರಾಜ್ಯಾಧ್ಯಕ್ಷರನ್ನು ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿ ನನ್ನ ಹಾಗೂ ಶಾಸಕರ ಭಾವನೆಗಳನ್ನು ಗಮನಕ್ಕೆ ತಂದಿದ್ದೇನೆ ಎಂದರು.

ಪದೇ ಪದೇ ಆ ವಿಷಯದ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ, ಬೀದಿಯಲ್ಲಿ ನಿಂತು ಮಾಧ್ಯಮಗಳ ಮುಂದೆ ಮಾತನಾಡಿದರೆ ನನ್ನ ವರ್ಚಸ್ಸಿಗೆ ಧಕ್ಕೆ ಆಗಲಿದೆ. ಒಂದು ತಿಂಗಳ ಹಿಂದೆಯೇ ದೆಹಲಿಗೆ ಹೋಗಿ ಕೇಂದ್ರ ಸಚಿವರನ್ನು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಅನೇಕ ಮುಖಂಡರನ್ನು, ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ನನ್ನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದ್ರು.

ABOUT THE AUTHOR

...view details