ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನಕಲಿ ಸಿಡಿ ಬಿಡುಗಡೆ ಮಾಡುವ ಮೂಲಕ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡುವುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶಾಸಕ ರಾಜು ಗೌಡ ಜೊತೆ ಆಗಮಿಸಿ ನೈತಿಕ ಬೆಂಬಲ ನೀಡಿದ ಬಳಿಕ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಲಾಗುತ್ತಿದೆ. ಇಂತಹ ಬ್ಲಾಕ್ ಮೇಲ್ ಮಾಡುವವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.