ಬೆಂಗಳೂರು :ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಸಹಾಯಕಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು, ಬಿಜೆಪಿಗೆ ಪೂರ್ಣಾವಧಿ ಕಾರ್ಯಕರ್ತೆಯಾಗಿ ಕೆಲಸ ಮಾಡುವ ವೇಳೆ ಸುಷ್ಮಾ ಸ್ವರಾಜ್ ಅವರಂತಹ ನಾಯಕಿಗೆ ಸಹಾಯಕಿಯಾಗಿ ಕೆಲಸ ಮಾಡಿದ್ದು ಅತ್ಯುತ್ತಮ ಅಭ್ಯಾಸದ ಸಮಯವಾಗಿತ್ತು ಎಂದು ಸುಷ್ಮಾ ಜೊತೆಗಿನ ತಮ್ಮ ಒಡನಾಟವನ್ನು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
ಬುದ್ದಿವಂತೆ, ಶ್ರಮಜೀವಿ, ಶಕ್ತಿಶಾಲಿ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಕೇವಲ ಎರಡು ತಿಂಗಳಿನಲ್ಲಿಯೇ ಕನ್ನಡ ಕಲಿತಿದ್ದರು, ಅವರ ಅಗಲಿಕೆ ದೇಶದ ರಾಜಕೀಯ ಕ್ಷೇತ್ರಕ್ಕೆ ಬಹು ದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.