ನವದೆಹಲಿ:ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಂಡ್ಯದ ವಿವಿಧ ಕಾಮಗಾರಿಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದರು.
ಪ್ರಧಾನಿ ಮೋದಿ ಭೇಟಿಯಾದ ಸುಮಲತಾ: ಮಂಡ್ಯ ಅಭಿವೃದ್ಧಿಗೆ ಅನುದಾನ ನೀಡಲು ಮನವಿ - undefined
ಮಂಡ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡುವಂತೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.
ಪ್ರಧಾನಿ ಮೋದಿ-ಸುಮಲತಾ
ಮಂಡ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡುವಂತೆ ಸುಮಲತಾ ಮನವಿ ಮಾಡಿದ್ದಾರೆ ಎಂದು ಅವರ ಅಪ್ತ ಮೂಲಗಳಿಂದ ತಿಳಿದು ಬಂದಿದೆ. ಮಂಡ್ಯ ಚುನಾವಣೆ ವೇಳೆ ತಮಗೆ ಬೆಂಬಲ ನೀಡಿದ್ದ ಬಿಜೆಪಿ ಜೊತೆ ಸದಾ ಇರುವುದಾಗಿ ಮೋದಿ ಅವರಿಗೆ ಸುಮಲತಾ ಹೇಳಿದರು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಅವರು, ಸುಮಲತಾ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಂಡ್ಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲೆಯ ಪ್ರಗತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿಸುವುದಾಗಿ ಸಹ ಭರವಸೆಯಿತ್ತರು ಎಂದು ತಿಳಿದುಬಂದಿದೆ.