ಬೆಂಗಳೂರು: ಶೀಘ್ರದಲ್ಲೇ ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ( ಎನ್ಐಎ) ಶಾಶ್ವತ ಕಚೇರಿ ಸ್ಥಾಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ಶೀಘ್ರದಲ್ಲೇ ಬೆಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿ: ಸಂಸದ ತೇಜಸ್ವಿಗೆ ಅಮಿತ್ ಶಾ ಭರವಸೆ
ಬೆಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿ ಸ್ಥಾಪಿಸಬೇಕೆಂದು ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಮನವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಎನ್ಐಎ ಕಚೇರಿ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಮಿತಿ ಮೀರಿವೆ. ಭಾರತ ವಿರೋಧಿಗಳಿಗೆ ಬೆಂಗಳೂರು ಒಂದು ಕೇಂದ್ರವಾಗಿ ಮಾರ್ಪಾಡಾಗುತ್ತಿದೆ. ಇದನ್ನು ಮೊಟಕುಗೊಳಿಸಲು ನಗರದಲ್ಲಿ ಶಾಶ್ವತ ಎನ್ಐಎ ಕೇಂದ್ರವನ್ನು ಸ್ಥಾಪಿಸಲು ನಾನು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ, ಶೀಘ್ರದಲ್ಲೇ ಮನವಿಗೆ ಸ್ಪಂದಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಆಗಸ್ಟ್ 11 ರಂದು ಡಿ.ಜೆ. ಹಳ್ಳಿಯಲ್ಲಿ ನಡೆದ ಘಟನೆಯನ್ನು ಎನ್ಐಎ ತನಿಖೆ ನಡೆಸಿದೆ. ಈ ವೇಳೆ ಇದು ಪೂರ್ವ ನಿಗದಿತ ಕೃತ್ಯ ಎಂಬುದು ಬಯಲಾಗಿದೆ ಎಂದು ಅವರು ಹೇಳಿದ್ದಾರೆ.