ಬೆಂಗಳೂರು :ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ನಿದ್ದೆ ಮಾತ್ರೆ ತೆಗೆದುಕೊಂಡಿದ್ದಾರೆ. 8.30ಕ್ಕೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಮೊದಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದೆವು. ನಂತರ 10 ಗಂಟೆಗೆ ಐಸಿಯುಗೆ ಶಿಫ್ಟ್ ಮಾಡಲಾಯಿತು.
ಸಂತೋಷ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು - Santosh attempts suicide
ಒತ್ತಡದ ಹಿನ್ನೆಲೆ ಮೊದಲಿಂದಲೂ ಸಂತೋಷ್ ನಿದ್ದೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ನಿನ್ನೆ ಹೆಚ್ಚಿನ ಸಂಖ್ಯೆಯಲ್ಲಿ ಮಾತ್ರೆ ಸೇವಿಸಿದ್ದರಿದಂದ ತೊಂದರೆಯಾಗಿದೆ. ಸದ್ಯ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..
ಸಂತೋಷ್
ಅಲ್ಪ್ರಾಝೊಲಮ್ ನಿದ್ದೆ ಮಾತ್ರೆ ತೆಗೆದುಕೊಂಡಿರುವ ಸಂತೋಷ್, ಸದ್ಯ ಇದಕ್ಕೆ ಸಂಬಂಧಪಟ್ಟ ಚಿಕಿತ್ಸೆ ನೀಡಲಾಗಿದೆ. ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೆರಡು ದಿನಗಳಲ್ಲಿ ಡಿಶ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಒತ್ತಡದ ಹಿನ್ನೆಲೆ ಮೊದಲಿಂದಲೂ ಸಂತೋಷ್ ನಿದ್ದೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ನಿನ್ನೆ ಹೆಚ್ಚಿನ ಸಂಖ್ಯೆಯಲ್ಲಿ ಮಾತ್ರೆ ಸೇವಿಸಿದ್ದರಿದಂದ ತೊಂದರೆಯಾಗಿದೆ. ಸದ್ಯ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.