ಬೆಂಗಳೂರು: ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇವೆ ಎಂದು ನೂತನ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಹೊರಬರುತ್ತಿದ್ದಂತೆ ಸಚಿವರ ಬೆಂಬಲಿಗರು, ಅಭಿಮಾನಿಗಳು ಶುಭಾಶಯ ಕೋರಿ ಜೈಕಾರ ಹಾಕಿದರು. ಎಂಟಿಬಿ ನಾಗರಾಜ್ ಬೆಂಬಲಿಗರು, ಅವರನ್ನು ಹೆಗಲ ಮೇಲೆ ಕೂರಿಸಿಕೊಂಡು ತಮ್ಮ ಅಭಿಮಾನ ಪ್ರದರ್ಶಿಸಿದರು.